ಪ್ರಗತಿವಾಹಿನಿ ಸುದ್ದಿ; ಮುಂಬೈ: ಅಶ್ಲೀಲ ಚಿತ್ರಗಳ ನಿರ್ಮಾಣ ಪ್ರಕರಣದಲ್ಲಿ ಬಂಧನಕ್ಕೀಡಾಗಿದ್ದ ಉದ್ಯಮಿ, ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾಗೆ ಮುಂಬೈ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
50 ಸಾವಿರ ರೂಪಾಯಿಗಳ ಶ್ಯೂರಿಟಿಯೊಂದಿಗೆ ಮುಂಬೈ ಕೋರ್ಟ್, ರಾಜ್ ಕುಂದ್ರಾಗೆ ಜಾಮೀನು ಮಂಜೂರು ಮಾಡಿದೆ.
ನೀಲಿ ಚಿತ್ರಗಳ ನಿರ್ಮಾಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಕ್ರೈಂ ಬ್ರಾಂಚ್ ನಲ್ಲಿ ರಾಜ್ ಕುಂದ್ರಾ ವಿರುದ್ಧ ಪ್ರಕರಣ ದಾಖಲಾಗಿತ್ತು. ಖಚಿತ ಮಾಹಿತಿ ಮೇರೆಗೆ ಜುಲೈ 19ರಂದು ಉದ್ಯಮಿ ರಾಜ್ ಕುಂದ್ರಾನನ್ನು ಪೊಲೀಸರು ಬಂಧಿಸಿದ್ದರು. ನೀಲಿ ಚಿತ್ರಗಳ ನಿರ್ಮಾಣದಲ್ಲಿ ರಾಜ್ ಕುಂದ್ರ ಪ್ರಕರಣದ ಪ್ರಮುಖ ರೂವಾರಿಯಾಗಿದ್ದು, ರಾಜ್ ಕುಂದ್ರಾ ಹಾಗೂ ಇತರ ಆರೋಪಿಗಳ ವಿರುದ್ಧ ಇತ್ತೀಚೆಗಷ್ಟೇ ಪೊಲೀಸರು 1,400 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದರು. ಇದರಲ್ಲಿ ಶಿಲ್ಪಾ ಶೆಟ್ಟಿ ಹೆಸರು ಕೂಡ ಕೇಳಿಬಂದಿತ್ತು.
ರಾಜ್ ಕುಂದ್ರಾ ಬಂಧನವಾಗುತ್ತಿದ್ದಂತೆ ಹಲವು ಖ್ಯಾತ ನಟಿಯರು ರಾಜ್ ಕುಂದ್ರಾ ವಿರುದ್ಧ ಆರೋಪ ಮಾಡಿದ್ದರು. ಬಂಧನವಾಗಿ 2 ತಿಂಗಳ ಬಳಿಕ ಇದೀಗ ರಾಜ್ ಕುಂದ್ರಾಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಮರ್ಮಾಂಗಕ್ಕೆ ಗುದ್ದಿ ಅಣ್ಣನ ಮಗನನ್ನೇ ಕೊಂದ ಹಂತಕರು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ