
ಪ್ರಗತಿವಾಹಿನಿ ಸುದ್ದಿ; ಮುಂಬೈ: ಅಶ್ಲೀಲ ಸಿನಿಮಾ ನಿರ್ಮಾಣ ಆರೋಪದಲ್ಲಿ ಬಂಧನಕ್ಕೀಡಾಗಿರುವ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಜುಲೈ 19ರಂದು ಬಂಧನಕ್ಕೀಡಾಗಿದ್ದ ರಾಜ್ ಕುಂದ್ರಾರನ್ನು ಜುಲೈ 27ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿತ್ತು. ಇಂದು ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಇಂದು ಮತ್ತೆ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಈ ವೇಳೆ ನ್ಯಾಯಾಲಯ ರಾಜ್ ಕುಂದ್ರಾ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿಸುವಂತೆ ಆದೇಶ ನೀಡಿದೆ.
ತನಿಖೆಗೆ ರಾಜ್ ಕುಂದ್ರಾ ಸಹಕರಿಸುತ್ತಿಲ್ಲ ಎನ್ನಲಾಗಿದ್ದು, ರಾಜ್ ಕುಂದ್ರಾ ಜೊತೆ ಸಂಪರ್ಕದಲ್ಲಿರುವ ಹಲವರ ಬಗ್ಗೆ ಅನುಮಾನ ಮೂಡಿದ್ದು, ಈ ನಿಟ್ಟಿನಲ್ಲಿ ಹಲವರನ್ನು ತನಿಖೆಗೆ ಒಳಪಡಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಯಡಿಯೂರಪ್ಪಗೆ ಈಗ ಮದುವೆ ಮಾಡಿದ್ರೂ ನಾಲ್ಕು ಮಕ್ಕಳಾಗುತ್ತೆ; ವಯಸ್ಸಿನ ಕಾರಣಕ್ಕೆ ರಾಜೀನಾಮೆ ಸರಿಯಲ್ಲ ಎಂದ ಸಿ.ಎಂ.ಇಬ್ರಾಹಿಂ