Kannada NewsKarnataka NewsLatestPolitics

*ಅಧಿವೇಶನ ಎರಡು ದಿನ ಮುಂದಕ್ಕೆ*

ಪ್ರಗತಿವಾಹಿನಿ ಸುದ್ದಿ: ಸುರಪುರ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ್ ಹೃದಯಾಘಾತದಿಂದ ಮೃತಪಟ್ಟ ಹಿನ್ನೆಲೆಯಲ್ಲಿ ವಿಧಾನಸಭೆ ಅಧಿವೇಶನ ಎರಡು ದಿನ ಮುಂದಕ್ಕೆ ಹೋಗಿದೆ.

ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ತೆರಳಿ ರಾಜಾ ವೆಂಕಟಪ್ಪ ನಾಯಕ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ, ರಾಜಾ ವೆಂಕಟಪ್ಪ ನಾಯಕ್ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದರು.

ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಹಳ ಸಂಭಾವಿತ ರಾಜಕಾರಣಿ. ಕ್ಷೇತ್ರದ ಅಭಿವೃದ್ಧಿ, ಜನರ ಸಮಸ್ಯೆಗಳ ಬಗ್ಗೆಯೇ ಹೆಚ್ಚೆಚ್ಚು ಕಾಳಜಿ ವಹಿಸಿದ್ದರು. ಸೋತಾಗಲೂ ಜನರ ನಡುವೆಯೇ ಇದ್ದು ಅವರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದರು. ವೇರ್ ಹೌಸಿಂಗ್ ಕಾರ್ಪೊರೇಷನ್ ಅಧ್ಯಕ್ಷರಾಗಿ ಕೆಲಸ ಮಾಡಲು ಸಾಧ್ಯವಾಗಲಿಲ್ಲ ಎನ್ನುವ ಬೇಸರ ನನಗಿದೆ. ಮೊನ್ನೆ ಸ್ವಲ್ಪ ಗುಣಮುಖರಾಗುತ್ತಿದ್ದರು. ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎನ್ನುವ ನಿರೀಕ್ಷೆ ಇರಲಿಲ್ಲ. ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ.

ಶಾಸಕರ ನಿಧನದ ಹಿನ್ನೆಲೆಯಲ್ಲಿ ಸೋಮವಾರದ ಅಧಿವೇಶನವನ್ನು ಸಂತಾಪ ಸೂಚಕವಾಗಿ ಒಂದು ದಿನ ಮುಂದೂಡಲಾಗುವುದು. ಮಂಗಳವಾರ ರಾಜ್ಯಸಭಾ ಚುನಾವಣೆ ಇರುವುದರಿಂದ ಬುಧವಾರಕ್ಕೆ ಅಧಿವೇಶನ ಮುಂದೂಡಬೇಕಾಗುತ್ತದೆ ಎಂದು ಸಿಎಂ ತಿಳಿಸಿದರು.

Home add -Advt

Related Articles

Back to top button