
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೇಂದ್ರ ಸರ್ಕಾರದ 3 ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಕಾಂಗ್ರೆಸ್ ನೇತೃತ್ವದಲ್ಲಿ ನಡೆಯುತ್ತಿರುವ ರಾಜಭವನ ಚಲೋ ಪ್ರತಿಭಟನಾ ರ್ಯಾಲಿಯನ್ನು ಪೊಲೀಸರು ಮಾರ್ಗ ಮಧ್ಯೆಯೇ ತಡೆದಿದ್ದಾರೆ.
ಕಾಂಗ್ರೆಸ್ ನೇತೃತ್ವದಲ್ಲಿ ಕೆ ಎಸ್ ಆರ್ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್ ಗೆ ಆಗಮಿಸಿದ ರೈತರ ಪ್ರತಿಭಟನಾ ರ್ಯಾಲಿ, ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಸಮಾವೇಶ ನಡೆಸಿತು. ಬಳಿಕ ಅಲ್ಲಿಂದ ರಾಜಭವನದತ್ತ ಸಾಗಿದ ಪ್ರತಿಭಟನಾ ರ್ಯಾಲಿಯನ್ನು ಮಾಹಾರಾಣಿ ಕಾಲೇಜು ಬಳಿ ಪೊಲೀಸರು ಬ್ಯಾರಿಕೇಡ್ ಗಳನ್ನು ಹಾಕಿ ತಡೆದಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕರರ ನಡುವೆ ವಾಗ್ವಾದ ನಡೆದಿದೆ.
ಬಳಿಕ ಹಂತ ಹಂತವಾಗಿ ಪ್ರತಿಭಟನಾ ನಿರತ ರೈತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಬಿಎಂಟಿಸಿ ಬಸ್ ನಲ್ಲಿ ಪ್ರತಿಭಟನಾಕಾರರನ್ನು ಹತ್ತಿಸಿಕೊಂಡು ಕರೆದೊಯ್ದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ