
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು; ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ ಕಾಂಗ್ರೆಸ್ ನಾಯಕರ ನೇತೃತ್ವದಲ್ಲಿ ನಡೆಯುತ್ತಿದ್ದ ರಾಜಭವನ ಚಲೋ ರೈತರ ಪ್ರತಿಭಟನೆ ವೇಳೆ ಶಾಸಕಿ ಅಂಜಲಿ ನಿಂಬಾಳ್ಕರ್ ಅಸ್ವಸ್ಥಗೊಂಡಿದ್ದಾರೆ.
ರಾಜಭವನದತ್ತ ತೆರಳುತ್ತಿದ್ದ ಕಾಂಗ್ರೆಸ್ ನಾಯಕರನ್ನು ಪೊಲೀಸರು ಮಾರ್ಗ ಮಧ್ಯೆಯೇ ವಶಕ್ಕೆ ಪಡೆದಿದ್ದಾರೆ. ಈ ವೇಳೆ ಶಾಸಕಿ ಅಂಜಲಿ ನಿಂಬಾಳ್ಕರ್ ಅಸ್ವಸ್ಥಗೊಂಡಿದ್ದಾರೆ. ನಂತರ ಅಲ್ಲೇ ಕುಳಿತು ವಿಶ್ರಾಂತಿ ಪಡೆದುಕೊಂಡರು.
ಕಾಂಗ್ರೆಸ್ ರಾಜಭವನ ಚಲೋ ಪ್ರತಿಭಟನಾ ರ್ಯಾಲಿ ತಡೆದು ನಾಯಕರನ್ನು ವಶಕ್ಕೆ ಪಡೆದುಕೊಳ್ಳುತ್ತಿದ್ದಂತೆಯೇ ಪ್ರತಿಭಟನೆಗಳು ಭುಗಿಲೆದ್ದಿವೆ.
ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ, ಜಾರಕಿಹೊಳಿ, ಹೆಬ್ಬಾಳಕರ್ ಪೊಲೀಸರ ವಶಕ್ಕೆ
ರೈತರಿಗೆ ಮಾರಕವಾಗಿರುವ ಕೃಷಿ ಕಾಯ್ದೆ ಕೈಬಿಡಿ; ಕೇಂದ್ರ ಸರ್ಕಾರಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಆಗ್ರಹ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ