Kannada NewsKarnataka NewsLatest
*ರಾಜಭವನಕ್ಕೆ ಬಾಂಬ್ ಬೆದರಿಕೆ ಕರೆ*

ಪ್ರಗತಿವಾಹಿನಿ ಸುದ್ದಿ;
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಶಾಲೆಗಳಾಯ್ತು ಈಗ ರಾಜಭವನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ. ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಡಿಸೆಂಬರ್ 11ರ ರಾತ್ರಿ11:30ಕ್ಕೆ ಬೆದರಿಕೆ ಕರೆ ಬಂದಿದ್ದು, ತಕ್ಷಣ ಪೊಲೀಸರು ರಾಜಭವನಕ್ಕೆ ದೌಡಾಯಿಸಿ ತಪಾಸಣೆ ನಡೆಸಿದ್ದಾರೆ. ಪರಿಶೀಲನೆ ಬಳಿಕ ಇದೊಂದು ಹುಸಿ ಬಾಂಬ್ ಕರೆ ಎಂದು ತಿಳಿಸಿದ್ದಾರೆ.
ವಿಧನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳ ಪತ್ತೆಗೆ ಶೋಧ ಕಾರ್ಯ ನಡೆಸಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ಪದೇ ಪದೇ ಬಾಂಬ್ ಬೆದರಿಕೆ ಕರೆಗಳು ಬರುತ್ತಿದ್ದು, ಶಾಲೆಗಳ ಬಳಿಕ ಈಗ ರಾಜಭವನಕ್ಕೆ ಬಾಂಬ್ ಬೆದರಿಕೆ ಒಡ್ಡಿರುವುದು ಆತಂಕಕ್ಕೆ ಕಾರಣವಾಗಿದೆ.




