Belagavi NewsBelgaum NewsKarnataka NewsLatestPolitics

*ಕಾಂಗ್ರೆಸ್ ಸೇರಿದ ರಾಜಹಂಸಗಡ ಹಲವು ಬಿಜೆಪಿ ಮುಖಂಡರು*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ವಿಧಾನ ಸಭಾ ಕ್ಷೇತ್ರದಲ್ಲಿ ರಾಜಕೀಯ ಧೃವೀಕರಣ ಆರಂಭಗೊಂಡಿದ್ದು, ಹಲವಾರು ಬಿಜೆಪಿ ನಾಯಕರು ಕಾಂಗ್ರೆಸ್ ಸೇರುತ್ತಿದ್ದಾರೆ.


ರಾಜಹಂಸಗಡದ ಅನೇಕ ಹಿರಿಯ ಬಿಜೆಪಿ ಮುಖಂಡರು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದರು. ಸಿದ್ಧಪ್ಪ ಗಣಪತ ಪವಾರ್, ಲಕ್ಷ್ಮಣ ಸಿದ್ಧಪ್ಪ ತೋರ್ವತ್, ರುಕ್ಮಣ್ಣ ಸಿದ್ಧಪ್ಪ ಹವಳ ಮೊದಲಾದವರು ಕಾಂಗ್ರೆಸ್ ಪಕ್ಷ ಸೇರಿದರು.


ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಗೃಹ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಶಾಲು ಹಾಕಿ ಸ್ವಾಗತಿಸಿದರು. ಕಳೆದ 15 – 20 ವರ್ಷಗಳಿಂದ ತಾವು ಬಿಜೆಪಿಯಲ್ಲಿ ಕೆಲಸ ಮಾಡಿದ್ದು, ಗ್ರಾಮೀಣ ವಿಧಾನ ಸಭಾ ಕ್ಷೇತ್ರದಲ್ಲಿ ಈಗ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಕ್ರಮಗಳನ್ನು ನೋಡಿ ಲಕ್ಷ್ಮೀ ಹೆಬ್ಬಾಳಕರ್ ಅವರ ಕೈ ಬಸಪಡಿಸಬೇಕೆನ್ನುವ ಉದ್ಧೇಶದಿಂದ ಕಾಂಗ್ರೆಸ್ ಸೇರಿದ್ದಾಗಿ ಅವರು ತಿಳಿಸಿದರು.

Home add -Advt


ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತಗಳನ್ನು ಒಪ್ಪಿ ಮುಖಂಡರು ಕಾಂಗ್ರೆಸ್ ಸೇರಿದ್ದಾರೆ. ಅವರನ್ನು ಗೌರವದಿಂದ ನಡೆಸಿಕೊಳ್ಳಲಾಗುವುದು ಎಂದು ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.


ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್, ಕಾಡಾ ಅಧ್ಯಕ್ಷ ಯುವರಾಜ ಕದಂ, ಉಚಗಾಂವ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಾಳು ದೇಸೂರಕರ್, ಶಂಕರಗೌಡ ಪಾಟೀಲ, ಮನೋಹರ ಬೆಳಗಾಂವಕರ್, ಗಾಯತ್ರಿ ಪಾಟೀಲ ಸೇರಿದಂತೆ ಹಲವಾರು ಮುಖಂಡರು ಇದ್ದರು.

Related Articles

Back to top button