Belagavi NewsBelgaum NewsKarnataka NewsLatestPolitics

*ರಾಜಹಂಸಗಡದಲ್ಲಿ ಹಳದಿ-ಕುಂಕುಮ, ರಸ್ತೆ ಕಾಮಗಾರಿಗೆ ಪೂಜೆ ನೆರವೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ರಾಜಹಂಸಗಡ್ ಗ್ರಾಮದ ಒಳಗಿನ ರಸ್ತೆಗಳ ಅಭಿವೃದ್ಧಿಗಾಗಿ ಸುಮಾರು 1 ಕೋಟಿ ರೂ. ಅನುದಾನ ಒದಗಿಸಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಕಾಂಕ್ರೀಟ್ ರಸ್ತೆ ನಿರ್ಮಾಣದ ಕಾಮಗಾರಿಗೆ ಬುಧವಾರ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.

ನಂತರ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಅರಿಸಿನ-ಕುಂಕುಮ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು ಗ್ರಾಮದ ಸಮಗ್ರ ಅಭಿವೃದ್ಧಿಗೆ ಕಲೆದ 7 ವರ್ಷದಿಂದ ಸಾಕಷ್ಟು ಅನುದಾನ ಒದಗಿಸಲಾಗಿದೆ. ಹಿಂದೆಂದೂ ಕಾಣದ ರೀತಿಯಲ್ಲಿ ಇಡೀ ಕ್ಷೇತ್ರದ ಅಭಿವೃದ್ಧಿ ಮಾಡಲಾಗುತ್ತಿದ್ದು, ಜನರ ಸಹಕಾರ ಇದೇ ರೀತಿ ಇರಲಿ ಎಂದು ವಿನಂತಿಸಿದರು.

ಸಾವಿರಕ್ಕೂ ಹೆಚ್ಚು ಮಹಿಳೆಯರು ಸೇರಿದಂತೆ ದೊಡ್ಡ ಸಂಖ್ಯೆಯಲ್ಲಿ ಗ್ರಾಮಸ್ಥರು ಉಪಸ್ಥಿತರಿದ್ದರು. ಗ್ರಾಮದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡುತ್ತಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರ ಪರವಾಗಿ ಸಚಿವರನ್ನು ಸನ್ಮಾನಿಸಲಾಯಿತು.

Home add -Advt

ಈ ವೇಳೆ ಲಕ್ಷ್ಮಣ ತೋರಾವತ್, ಸಿದ್ದಪ್ಪ ಛತ್ರೆ, ಪಿ.ಜಿ.ಪವಾರ್, ಶಂಕರ್ ಎನ್, ಸುರೇಶ ತೋರಾವತ್, ಬಸವಂತ ತೋರಾವತ್, ಹನಮಂತ ನಾವಗೇಕರ್, ಮೊನಿಶ್ರೀ ತೋರಾವತ್, ಮಲ್ಲಿಕಾರ್ಜುನ, ಬಾಳು ದೇಸೂರಕರ್ ಮುಂತಾದವರು ಉಪಸ್ಥಿತರಿದ್ದರು.

Related Articles

Back to top button