Kannada NewsLatest

ಬೆಳಗಾವಿಯಲ್ಲಿ ಮೂವರು ಅಧಿಕಾರಿಗಳಿಗೆ ಎಸಿಬಿ ಶಾಕ್

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳ್ಳಂಬೆಳಿಗ್ಗೆ ಎಸಿಬಿ ಅಧಿಕಾರಿಗಳು  ಕಾರ್ಯಾಚರಣೆ ಆರಂಭಿಸಿದ್ದು, ಬೆಳಗಾವಿ ಸೇರಿದಂತೆ ಒಟ್ಟು 60 ಕಡೆಗಳಲ್ಲಿ ಏಕಕಾಲದಲ್ಲಿ ಎಸಿಬಿ ದಾಳಿ ನಡೆಸಿದೆ.

ಬೆಳಗಾವಿ ಹೆಸ್ಕಾಂ ವಿಭಾಗದ ಗ್ರೂಪ್ ಸಿ ನೌಕರ ನಾತಾಜಿ ಪಾಟೀಲ್ ಗೆ ಎಸಿಬಿ ಶಾಕ್ ಕೊಟ್ಟಿದೆ. ಬೆಳಗಾವಿ ನಗರದ ಮನೆ, ಕಚೇರಿ ಸೇರಿ ಮೂರು ಕಡೆ ದಾಳಿ ನಡೆಸಿದೆ.

Home add -Advt

ಹೆಸ್ಕಾಂ ಡಿಪಾರ್ಟ್ ಮೆಂಟ್ ನಲ್ಲಿ ಲೈನ್ ಮ್ಯಾನ್ ಮ್ಯಾಕಾನಿಕ್ ಗ್ರೇಡ್ ಕೆಲಸ ಮಾಡುತ್ತಿದ್ದ ನಾತಾಜಿ ಮನೆ ನೇಲೆ ಎಸಿಬಿ ಎಸ್ ಪಿ ಬಿ ಎಸ್ ನೇಮಗೌಡ ನೇತೃತ್ವದಲ್ಲಿ ದಾಳಿ ನಡೆದಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಹೆಸ್ಕಾಂನ ನೇತಾಜಿ ಪಾಟೀಲ್ ಜೊತೆಗೆ ಬೆಳಗಾವಿಯ ಆರ್ ಟಿ ಒ ವೆಹಿಕಲ್ ಇನ್ಸ್ ಪೆಕ್ಟರ್ ಸದಾಶಿವ ಮರಲಿಂಗಣ್ಣನವರ್, ಸಹಕಾರಿ ಅಭಿವೃದ್ಧಿ ಅಧಿಕಾರಿ ಎ.ಕೆ.ಮಾಸ್ತಿ ಅವರ ಮನೆ ಕಚೇರಿಗಳ ಮೇಲೂ ದಾಳಿ ನಡೆದಿದೆ.

Related Articles

Back to top button