*ಸಿಎಂ ನೇತೃತ್ವದ ನಿಯೋಗದಿಂದ ರಕ್ಷಣಾ ಸಚಿವರ ಭೇಟಿ, 2 ಡಿಫೆನ್ಸ್ ಕಾರಿಡಾರ್‌ಗೆ ಮನವಿ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರ ಮತ್ತು ಹುಬ್ಬಳ್ಳಿ ಧಾರವಾಡ-ಬೆಳಗಾವಿ-ವಿಜಯಪುರ ಜಿಲ್ಲೆಗಳಿಗೆ ಕೇಂದ್ರ ಸರಕಾರವು ಎರಡು ಪ್ರತ್ಯೇಕ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡಬೇಕೆಂದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರದ ನಿಯೋಗವು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಬುಧವಾರ ಇಲ್ಲಿ ಮನವಿ ಸಲ್ಲಿಸಿದೆ.
ನಿಯೋಗದಲ್ಲಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ, ಇಂಧನ ಸಚಿವ ಕೆ ಜೆ ಜಾರ್ಜ್, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಇದ್ದರು.
ಕೇಂದ್ರ ಸರಕಾರವು 2018ರಲ್ಲಿ ಉತ್ತರಪ್ರದೇಶ ಮತ್ತು ತಮಿಳುನಾಡಿಗೆ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡಿದೆ. ಆದರೆ, ದೇಶದ ರಕ್ಷಣಾ ಮತ್ತು ವೈಮಾಂತರಿಕ್ಷ ವಲಯದಲ್ಲಿ ಕರ್ನಾಟಕವು ಶೇ.75ರಷ್ಟು ಪಾಲು ಹೊಂದಿದ್ದು, ಜಾಗತಿಕವಾಗಿ ಮೂರನೇ ಅತ್ಯುತ್ತಮ ಕಾರ್ಯಪರಿಸರ ಹೊಂದಿರುವ ಹೆಗ್ಗಳಿಕೆ ಸಂಪಾದಿಸಿದೆ. ಹೀಗಾಗಿ, ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕಗಳಿಗೆ ಒಂದೊಂದು ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡಿದರೆ, ಇದು ಮೇಕ್ ಇನ್ ಇಂಡಿಯಾ ಉಪಕ್ರಮಕ್ಕೂ ಬಲ ತುಂಬುತ್ತದೆ ಎಂದು ಸಿದ್ದರಾಮಯ್ಯ ಮನದಟ್ಟು ಮಾಡಿಕೊಟ್ಟಿದ್ದಾರೆ. ಈ ಸಂದರ್ಭದಲ್ಲಿ ಸಚಿವ ಪಾಟೀಲ ಅವರು ಕೂಡ ಪೂರಕ ಮಾಹಿತಿ ಒದಗಿಸಿದರು.
ಉತ್ತರ ಕರ್ನಾಟಕದ ಮೇಲ್ಕಂಡ ಮೂರು ಜಿಲ್ಲೆಗಳಲ್ಲಿ ರಕ್ಷಣಾ ವಲಯದ ಉತ್ಪಾದನಾ ಕಂಪನಿಗಳಾದ ಬಾಲೂ ಫೋರ್ಜ್, ಏಕಸ್, ಬಿಕಾರ್ ಏರೋಸ್ಪೇಸ್, ವಾಲ್‌ಚಂದ್ ನಗರ್ ಇಂಡಸ್ಟ್ರೀಸ್ ಮುಂತಾದವು ನೆಲೆಯೂರಿವೆ. ಜತೆಗೆ ಬೆಳಗಾವಿಯಲ್ಲಿ 250 ಎಕರೆಯಲ್ಲಿ ದೇಶದ ಪ್ರಪ್ರಥಮ ಪ್ರಿಸಿಶನ್ ಉತ್ಪಾದನೆಯ ವಿಶೇಷ ಆರ್ಥಿಕ ವಲಯವು ಸಕ್ರಿಯವಾಗಿದೆ. ಇಲ್ಲಿ 31 ಘಟಕಗಳಿದ್ದು, 5 ಸಾವಿರಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡಿವೆ ಎಂದು ಈ ಸಂದರ್ಭದಲ್ಲಿ ಗಮನಕ್ಕೆ ತರಲಾಗಿದೆ.
ದಕ್ಷಿಣ ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ರಕ್ಷಣಾ ಸಾಮಗ್ರಿ ಮತ್ತು ವೈಮಾಂತರಿಕ್ಷ ಕಂಪನಿಗಳಾದ ಸಾರ್ವಜನಿಕ ವಲಯದ ಎಚ್‌ಎಎಲ್, ಕಾಲಿನ್ಸ್ ಏರೋಸ್ಪೇಸ್, ಡೈನಮ್ಯಾಟಿಕ್ ಟೆಕ್ನಾಲಜೀಸ್, ಸೆಂಟಮ್, ಸಾಸ್ಮೋಸ್, ಬೆಲ್ಲಾಟ್ರಿಕ್ಸ್ ಮುಂತಾದವು ಇವೆ. ಇವುಗಳೊಂದಿಗೆ ಟಿಎಎಸ್‌ಎಲ್ ತನ್ನ ಅಂತಿಮ ಜೋಡಣಾ ಘಟಕವನ್ನು ಆರಂಭಿಸುತ್ತಿದೆ. ಏರ್ ಇಂಡಿಯಾ ಮತ್ತು ಇಂಡಿಗೋ ಸಾವಿರಾರು ಕೋಟಿ ರೂ. ಬಂಡವಾಳ ಹೂಡಿಕೆಯೊಂದಿಗೆ ತಮ್ಮ ಎಂಆರ್‌ಒ ಘಟಕಗಳನ್ನು ಬೆಂಗಳೂರಿನ ಸಮೀಪದಲ್ಲಿ ಸ್ಥಾಪಿಸುತ್ತಿವೆ. ದೇವನಹಳ್ಳಿಯಲ್ಲಿ 2 ಸಾವಿರ ಎಕರೆ ವಿಸ್ತಾರದ ಹೈಟೆಕ್ ರಕ್ಷಣಾ ಮತ್ತು ವೈಮಾಂತರಿಕ್ಷ ಪಾರ್ಕ್ ಇದೆ. ಈ ಭಾಗದಲ್ಲಿ ದೇಶದ ಏರ್‌ಕ್ರಾಫ್ಟ್ ಮತ್ತು ಸ್ಪೇಸ್‌ಕ್ರಾಫ್ಟ್ ವಲಯದ ಶೇಕಡ 25ರಷ್ಟು ತಯಾರಿಕೆ ನಡೆಯುತ್ತಿದೆ. ವಿಮಾನ ಮತ್ತು ಹೆಲಿಕಾಪ್ಟರ್ ತಯಾರಿಕೆಯಲ್ಲಿ ರಾಜ್ಯದ ಕೊಡುಗೆ ಶೇ.67ರಷ್ಟಿದೆ. ಇವೆಲ್ಲವನ್ನೂ ಪರಿಗಣಿಸಿ, ಎರಡು ಡಿಫೆನ್ಸ್ ಕಾರಿಡಾರ್‌ಗಳನ್ನು ಮಂಜೂರು ಮಾಡಬೇಕೆಂದು ನಿಯೋಗವು ಒತ್ತಾಯಿಸಿದೆ.
ಮನವಿ ಸ್ವೀಕರಿಸಿದ ರಾಜನಾಥ್ ಸಿಂಗ್, ಇವುಗಳನ್ನು ಸೂಕ್ತವಾಗಿ ಪರಿಶೀಲಿಸುವ ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
Chief Minister Urges Rajnath Singh to Sanction Two Defence Corridors for Karnataka; Says Move Will Boost Make in India Mission
New Delhi: Karnataka Chief Minister Siddaramaiah met Defence Minister Rajnath Singh and requested approval for the establishment of two Defence Industrial Corridors in the state. He was accompanied by Deputy Chief Minister D.K. Shivakumar, Minister for Large and Medium Industries M.B. Patil, Minister for Energy KJ George, and Minister for Urban Development Bairathi Suresh.
The Chief Minister sought support for setting up one defence corridor each in North and South Karnataka. The proposed regions include Belagavi, Hubballi-Dharwada, and Vijayapura districts in the North, and Kolar, Chikkaballapura, and Bengaluru Rural districts in the South, all of which are well-suited for developing defence corridors, he noted.
Siddaramaiah highlighted that the North Karnataka region is already home to key defence manufacturing companies such as Balu Forge, Aequs, Bikar Aerospace, and Walchandnagar Industries, among others. Notably, Belagavi houses India’s first Precision Manufacturing Special Economic Zone (SEZ), which spans over 250 acres and supports a vertically integrated aerospace ecosystem. This SEZ boasts the highest machining capacity in the country, delivering more than one million machining hours annually, hosting 31 operational units, and employing over 5,000 people, he explained.
Turning to the South Karnataka ecosystem, Siddaramaiah stated that Kolar, Chikkaballapur, and Bengaluru Rural districts have a longstanding legacy in aero space and defence. With Hindustan Aeronautics Limited (HAL) headquartered in this region, and Tata Advanced Systems Ltd (TASL) setting up the final assembly line for the C-130J aircraft, along with expanding MRO (Maintenance, Repair, and Overhaul) operations by Air India and IndiGo, the region is poised to become India’s epicentre for aerospace and defence manufacturing.
He also pointed out that the region is home to the Hi-tech Aerospace and Defence Park in Devanahalli, which spans approximately 2,000 acres and houses key industry players such as Collins Aerospace, Dynamatic Technologies, Centum, Sasmos, and Bellatrix, among others.
The Chief Minister emphasised that the approval for these defence corridors in Karnataka would significantly strengthen the Make in India initiative by boosting indigenous defence production and creating skilled employment. It would also attract both domestic and foreign investment by showcasing Karnataka’s world-class supply chain and quality assurance capabilities.
Further, Siddaramaiah said the corridors would foster innovation through collaboration between industry leaders, research institutions, and start-ups, thereby enabling the development of cutting-edge defence technologies.
“Karnataka currently accounts for 67% of all aircraft and helicopter manufacturing for India’s defence services and is home to 25% of the country’s aircraft and spacecraft industry. Approving the proposed defence corridors will allow this industry to leverage Karnataka’s deep-rooted expertise and drive further growth in the sector,” the Chief Minister claimed.
Rajnath Singh, who received the memorandum submitted by Siddaramaiah and his ministers, has assured them that the request will be reviewed, according to the sources.