Kannada NewsLatestNational
*ದೆಹಲಿ ಸ್ಫೋಟದ ಹಿಂದಿರುವ ರೂವಾರಿಗಳನ್ನು ಶಿಕ್ಷಿಸದೇ ಬಿಡುವುದಿಲ್ಲ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ದೆಹಲಿಯ ಕೆಂಪುಕೋಟೆ ಬಳಿಯ ಮೆಟ್ರೋ ನಿಲ್ದಾಣದ ಬಳಿ ಕಾರು ಸ್ಫೋಟ ಪ್ರಕರಣದಲ್ಲಿ ೧೨ ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಘಟನೆ ಆಘಾತ ತಂದಿದೆ. ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕಾರು ಸ್ಫೋಟ ಘಟನೆಯಲ್ಲಿ ತಮ್ಮವರನ್ನು ಕಳೆದುಕೊಂಡಿರುವ ಕುಟುಂಬಗಳಿಗೆ ಭಗವಂತ ದು:ಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
ಇದೇ ವೇಳೆ ಸ್ಫೋಟದ ಹಿಂದೆ ಭಯೋತ್ಪಾದಕ ಕೃತ್ಯದ ಶಂಕೆ ಇದೆ. ದೆಹಲಿ ಸ್ಫೋಟದ ಹಿಂದಿರುವ ರೂವಾರಿಗಳನ್ನು ಯಾವುದೇ ಕಾರಣಕ್ಕೂ ಬಿಡಲ್ಲ. ಅವರಿಗೆ ತಕ್ಕ ಶಿಕ್ಷೆ ಹಾಗೂ ಶಾಸ್ತಿಯಾಗಲಿದೆ ಎಂದು ಎಚ್ಚರಿಸಿದ್ದಾರೆ.
ಸ್ಫೋಟದ ಹಿಂದಿರುವ ಯಾರನ್ನೂ ಬಿಡುವುದಿಲ್ಲ. ಅವರಿಗೆ ಕಠಿಣ ಶಿಕ್ಷೆ ವಿಧಿಸುತ್ತೇವೆ. ಈಗಾಗಲೇ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ ಎಂದು ದೇಶದ ಜನತೆಗೆ ಭರವಸೆ ನೀಡಿದರು.




