Latest

ಪುನೀತ್ ರಾಜ್ ಕುಮಾರ್ ಗೆ ಕನ್ನಡ ರತ್ನ ಪ್ರಶಸ್ತಿ; ಬೆಂಗಳೂರಿಗೆ ಆಗಮಿಸಿದ ನಟ ರಜನಿಕಾಂತ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯಾದ್ಯಂತ 67ನೇ ಕನ್ನಡ ರಾಜ್ಯೋತ್ಸವದ ಸಂಭ್ರದಂದೇ ಇಂದು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ರಾಜ್ಯ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಿದೆ. ವಿಧಾನಸೌಧದಲ್ಲಿ ನಡೆಯಲಿರುವ ಅದ್ಧೂರು ಕಾರ್ಯಕ್ರಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಸಾವಿರಾರು ಅಭಿಮಾನಿಗಳು ವಿಧಾನಸೌಧದತ್ತ ಆಗಮಿಸಿದ್ದಾರೆ.

ನಟ ದಿ.ಪುನೀತ್ ರಾಜ್ ಕುಮಾರ್ ಅವರಿಗೆ ಕನ್ನಡ ರತ್ನ ಪ್ರಶಸ್ತಿ ಪ್ರದಾನ ಹಿನ್ನೆಲೆಯಲ್ಲಿ ತಮಿಳು ನಟ, ಸೂಪರ್ ಸ್ಟಾರ್ ರಜನಿ ಕಾಂತ್ ಬೆಂಗಳೂರಿಗೆ ಆಗಮಿಸಿದ್ದಾರೆ. ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ನಟ ರಜನಿಕಾಂತ್ ಹಾಗೂ ಜ್ಯೂ.ಎನ್ ಟಿ ಆರ್ ಅವರನ್ನು ಕಾರ್ಯಕ್ರಾಕ್ಕೆ ಮುಖ್ಯ ಅತಿಥಿಗಳನ್ನಾಗಿ ಆಹ್ವಾನಿಸಿದ್ದು, ಈ ಹಿನ್ನೆಲೆಯಲ್ಲಿ ಇಬ್ಬರೂ ನಟರು ಬೆಂಗಳೂರಿಗೆ ಆಗಮಿಸಿದ್ದಾರೆ.

ಚೆನ್ನೈನಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿನ ಹೆಚ್ ಎ ಎಲ್  ವಿಮಾನ ನಿಲ್ದಾಣಕ್ಕೆ ಬಂದಿಳಿದ ರಜನಿಕಾಂತ್ ಅವರನ್ನು ಸರ್ಕಾರದ ಪರವಾಗಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಆತ್ಮೀಯವಾಗಿ ಸ್ವಾಗತಿಸಿದರು.

ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ನಡೆಯಲಿರುವ ಪುನೀತ್ ರಾಜ್ ಕುಮಾರ್ ಅವರಿಗೆ ಕನ್ನಡ ರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಜನಿಕಾಂತ್ ಭಾಗವಹಿಸಲಿದ್ದಾರೆ.

Home add -Advt

ಜನಾರ್ಧನ ರೆಡ್ದಿ ಮನವೊಲಿಕೆ ಯತ್ನ ಮಾಡುತ್ತೇನೆ; ಬೇಸರಕ್ಕೆ ಕಾರಣ ಗೊತ್ತಿಲ್ಲ ಎಂದ ಸಚಿವ ಶ್ರೀರಾಮುಲು

https://pragati.taskdun.com/politics/shreeramulureactionbjpjanardhana-reddyenger/

Related Articles

Back to top button