ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಸೂಪರ್ ಸ್ಟಾರ್ ರಜನಿಕಾಂತ್, ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ರಕ್ತದೊತ್ತಡದಲ್ಲಿ ತೀವ್ರ ಏರುಪೇರಾದ ಕಾರಣ ಹೈದರಾಬಾದ್ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದ ರಜನಿಕಾಂತ್ ಇದೀಗ ಗುಣಮುಖರಾಗಿದ್ದು, ಅವರ ರಕ್ತದೊತ್ತಡವೂ ಸ್ಥಿರವಾಗಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಚೆನ್ನೈಗೆ ತೆರಳಿದ್ದಾರೆ.
ರಜನಿಕಾಂತ್ ಅವರಿಗೆ ವೈದ್ಯರು ಒಂದು ವಾರಗಳ ಕಾಲ ಸಂಪೂರ್ಣ ವಿಶ್ರಾಂತಿ ಪಡೆಯುವಂತೆ ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ