ಪ್ರಗತಿವಾಹಿನಿ ಸುದ್ದಿ; ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಸಕ್ರಿಯ ರಾಜಕೀಯ ಪ್ರವೇಶದ ಬಗ್ಗೆ ಇಂದು ಅಧಿಕೃತವಾಗಿ ಘೋಷಿಸಲಿದ್ದಾರೆ. ಈ ಮೂಲಕ ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ರಜನಿ ಸ್ಪರ್ಧಿಸಲಿದ್ದಾರಾ ಎಂಬ ಕುತೂಹಲಕ್ಕೆ ತೆರೆ ಬೀಳಲಿದೆ.
ರಜನಿಕಾಂತ್ ರಾಜಕೀಯಕ್ಕೆ ಕಾಲಿಡುವ ಬಗ್ಗೆ ಹಲವು ವರ್ಷಗಳಿಂದ ಚರ್ಚೆ ನಡೆದಿದ್ದು, ಕಳೆದ ಮಾರ್ಚ್ ತಿಂಗಳಲ್ಲಿ ರಜನಿ ಮಕ್ಕಳ್ ಮಂಡ್ರಂ ಮೂಲಕ ಪಕ್ಷವನ್ನು ಸ್ಥಾಪಿಸಿದ್ದರು. ಆದರೆ ಅನಾರೋಗ್ಯದಿಂದಾಗಿ ರಜನಿ ರಾಜಕೀಯದಿಂದ ದೂರ ಉಳಿದಿದ್ದರು. ಇದೀಗ ತಮಿಳುನಾಡು ವಿಧಾನಸಭಾ ಚುನಾವಣೆ ಸಮಿಸುತ್ತಿರುವುದರಿಂದ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಇಂದು ರಜನಿ ಅಧಿಕೃತವಾಗಿ ಮಾಹಿತಿ ನೀಡಲಿದ್ದಾರೆ.
ಈಗಾಗಲೇ ರಜನಿ ಮಕ್ಕಳ್ ಮಂಡ್ರಂ ಪಕ್ಷದ ಪದಾಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದು, ಕೆಲವೆ ಸಮಯದಲ್ಲಿ ಸುದ್ದಿಗೋಷ್ಠಿ ಮೂಲಕ ಅಧಿಕೃತವಾಗಿ ಘೋಷಿಸಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ