Latest

ರಜನಿಕಾಂತ್ ಸಕ್ರಿಯ ರಾಜಕೀಯದ ಬಗ್ಗೆ ಇಂದು ಅಧಿಕೃತ ಘೋಷಣೆ

ಪ್ರಗತಿವಾಹಿನಿ ಸುದ್ದಿ; ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಸಕ್ರಿಯ ರಾಜಕೀಯ ಪ್ರವೇಶದ ಬಗ್ಗೆ ಇಂದು ಅಧಿಕೃತವಾಗಿ ಘೋಷಿಸಲಿದ್ದಾರೆ. ಈ ಮೂಲಕ ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ರಜನಿ ಸ್ಪರ್ಧಿಸಲಿದ್ದಾರಾ ಎಂಬ ಕುತೂಹಲಕ್ಕೆ ತೆರೆ ಬೀಳಲಿದೆ.

ರಜನಿಕಾಂತ್ ರಾಜಕೀಯಕ್ಕೆ ಕಾಲಿಡುವ ಬಗ್ಗೆ ಹಲವು ವರ್ಷಗಳಿಂದ ಚರ್ಚೆ ನಡೆದಿದ್ದು, ಕಳೆದ ಮಾರ್ಚ್​ ತಿಂಗಳಲ್ಲಿ ರಜನಿ ಮಕ್ಕಳ್ ಮಂಡ್ರಂ ಮೂಲಕ ಪಕ್ಷವನ್ನು ಸ್ಥಾಪಿಸಿದ್ದರು. ಆದರೆ ಅನಾರೋಗ್ಯದಿಂದಾಗಿ ರಜನಿ ರಾಜಕೀಯದಿಂದ ದೂರ ಉಳಿದಿದ್ದರು. ಇದೀಗ ತಮಿಳುನಾಡು ವಿಧಾನಸಭಾ ಚುನಾವಣೆ ಸಮಿಸುತ್ತಿರುವುದರಿಂದ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಇಂದು ರಜನಿ ಅಧಿಕೃತವಾಗಿ ಮಾಹಿತಿ ನೀಡಲಿದ್ದಾರೆ.

Home add -Advt

ಈಗಾಗಲೇ ರಜನಿ ಮಕ್ಕಳ್ ಮಂಡ್ರಂ ಪಕ್ಷದ ಪದಾಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದು, ಕೆಲವೆ ಸಮಯದಲ್ಲಿ ಸುದ್ದಿಗೋಷ್ಠಿ ಮೂಲಕ ಅಧಿಕೃತವಾಗಿ ಘೋಷಿಸಲಿದ್ದಾರೆ.

 

Related Articles

Back to top button