Kannada NewsKarnataka NewsLatestSports

*ಕಾಲ್ತುಳಿತ ದುರಂತದಲ್ಲಿ 11 ಜನರು ಸಾವು: ಕೇಸ್ ದಾಖಲಿಸಿಕೊಂಡ ಮಕ್ಕಳ ಹಕ್ಕುಗಳ ಆಯೋಗ*

ಪ್ರಗತಿವಾಹಿನಿ ಸುದ್ದಿ: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಸಂಭವಿಸಿ 11 ಜನರು ಸಾವನ್ನಪ್ಪಿರುವ ಪ್ರಕರಣ್ ಅಸಂಬಂಧ ಇದೀಗ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ಕೂಡ ಕೇಸ್ ದಾಖಲಿಸಿಕೊಂಡಿದೆ.

ಕಾಲ್ತುಳಿತ ದುರಂತ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ಸಿಐಡಿಗೆ ಪತ್ರ ಬರೆದಿದೆ.

ಕಾಲ್ತುಳಿತ ದುರಂತದಲ್ಲಿ ಮಕ್ಕಳಿಗೂ ಹಾನಿಯಾಗಿರುವ ಶಂಕೆ ಇದೆ. ಈ ನಿಟ್ಟಿನಲ್ಲಿ ಘಟನೆ ಬಗ್ಗೆ ಸಂಪೂರ್ಣ ಮಾಹಿತಿ ನೀಡುವಂತೆ ಹಾಗೂ ಎಷ್ಟು ಮಕ್ಕಳಿಗೆ ತೊಂದರೆಯಾಗಿದೆ? ಎಂಬುದನ್ನು ತಿಳಿಸುವಂತೆ ಪತ್ರದಲ್ಲಿ ಕೇಳಲಾಗಿದೆ.

ಈ ಬಗ್ಗೆ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ನಾಗಣ್ಣ ಗೌಡ ಸಿಐಡಿಗೆ ಪತ್ರ ಬರೆದಿದ್ದು, ವಿವರ ನೀಡುವಂತೆ ಕೋರಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button