Latest

ರಾಜಣ್ಣ ಬಂಧನ ಪ್ರಕರಣ; ಬಿ.ವೈ.ವಿಜಯೇಂದ್ರ ಸ್ಪಷ್ಟನೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಾರ್ವಜನಿಕ ಕ್ಷೇತ್ರದಲ್ಲಿರುವಾಗ ನೆರವು ಕೇಳುವವರನ್ನು ಅನುಮಾನಿಸಿ ನೋಡಲಾಗದು. ಹಾಗೆಂದು ಎಚ್ಚರ ತಪ್ಪಲಾಗದು. ಹೆಸರು ದುರುಪಯೋಗಪಡಿಸಿಕೊಂಡು ಕಳಂಕ ಹಚ್ಚುವ ವಂಚಕರಿಂದ ತೊಂದರೆ ಹೆಚ್ಚಾಗಿದೆ ಈ ನಿಟ್ಟಿನಲ್ಲಿ ರಾಜಣ್ಣ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಸಿಎಂ ಬಿ.ಎಸ್ ವೈ ಪುತ್ರ ವಿಜಯೇಂದ್ರ ತಿಳಿಸಿದ್ದಾರೆ.

ಸಾರ್ವಜನಿಕ ಕ್ಷೇತ್ರದಲ್ಲಿರುವವರ ಹೆಸರು ದುರುಪಯೋಗಪಡಿಸಿಕೊಂಡು ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಇದು ವಿರೋಧಿಗಳಿಗೆ ಅಪಪ್ರಚಾರದ ಸರಕಾಗಿಯೂ ಬಳಕೆಯಾಗುತ್ತಿದೆ. ಸಾರ್ವಜನಿಕರು ಮೋಸ ಹೋಗಬಾರದೆಂಬ ಹಿತದೃಷ್ಟಿಯಿಂದ ಹಾಗೂ ನನ್ನ ವ್ಯಕ್ತಿತ್ವ ರಕ್ಷಣೆಗಾಗಿ, ಅನಿವಾರ್ಯವಾಗಿ ನೀಡಿದ ದೂರಿನ ಮೇಲೆ ಪೋಲಿಸರು ಕ್ರಮ ತೆಗೆದುಕೊಂಡಿದ್ದಾರೆ.

ಸಾರ್ವಜನಿಕ ಕ್ಷೇತ್ರದಲ್ಲಿರುವ ಮುಖಂಡರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವ, ವಂಚಿಸುವವರ ಬಗ್ಗೆ ಸಮಾಜ ಎಚ್ಚರದಿಂದರಬೇಕೆಂದು ವಿನಂತಿಸುವೆ ಎಂದಿದ್ದಾರೆ.

ರೋಟರಿ ಕ್ಲಬ್ ನಿಂದ ಸಾಧಕ ವೈದ್ಯರು, ಚಾರ್ಟರ್ಡ್ ಅಕೌಂಟಂಟ್ ಗಳಿಗೆ ಸನ್ಮಾನ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button