Latest

ರಾಜಭವನದಲ್ಲಿ ಸಿಎಂ ಹಾಗೂ ಕಾಂಗ್ರೆಸ್ ಶಾಸಕರ ಧರಣಿ

ಪ್ರಗತಿವಾಹಿನಿ ಸುದ್ದಿ; ಜೈಪುರ: ರಾಜಸ್ಥಾನದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು, ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹಾಗೂ ಕಾಂಗ್ರೆಸ್ ನಾಯಕರು, ರಾಜ್ಯಪಾಲರು ಕೂಡಲೇ ಅಧಿವೇಶನ ಕರೆಯಬೇಕು ಎಂದು ಒತ್ತಾಯಿಸಿ ರಾಜಭವನದಲ್ಲಿಯೇ ಧರಣಿ ಆರಂಭಿಸಿದ್ದಾರೆ.

ಅಶೋಕ್ ಗೆಹ್ಲೋಟ್ ಅವರು ಇಂದು ತಮ್ಮ ಬೆಂಬಲಿಗ ಶಾಸಕರೊಂದಿಗೆ ರಾಜಭವನಕ್ಕೆ ತೆರಳಿ, ರಾಜ್ಯಪಾಲ ಕಲರಾಜ್ ಮಿಶ್ರಾ ಅವರನ್ನು ಭೇಟಿ ಮಾಡಿದ್ದಾರೆ. ಅಲ್ಲದೆ ಸೋಮವಾರದಿಂದ ರಾಜ್ಯ ವಿಧಾನಸಭೆ ಅಧಿವೇಶನ ಕರೆಯುವಂತೆ ಮನವಿ ಮಾಡಿದ್ದಾರೆ. ಆದರೆ ಇದಕ್ಕೆ ರಾಜ್ಯಪಾಲರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಈ ಹಿನ್ನಲೆಯಲ್ಲಿ ಸಿಎಂ ಗೆಹ್ಲೋಟ್ ಹಾಗೂ ಕಾಂಗ್ರೆಸ್ ಶಾಸಕರು ರಾಜಭವನದಲ್ಲಿಯೇ ಧರಣಿ ಆರಂಭಿಸಿದ್ದು, ರಾಜ್ಯಪಾಲರು ಕೇಂದ್ರ ಸರ್ಕಾರದ ಒತ್ತಡಕ್ಕೆ ಮಣಿದು ವಿಧಾನಸಭೆ ಅಧಿವೇಶನ ಕರೆಯುತ್ತಿಲ್ಲ. ರಾಜ್ಯಪಾಲರ ಈ ನಡೆ ಸೂಕ್ತವಲ್ಲ, ಕೂಡಲೇ ವಿಧಾನಸಭೆ ಅಧಿವೇಶನ ಕರೆಯಬೇಕು ಎಂದು ಘೋಷಣೆ ಕೂಗಿದ್ದಾರೆ.

ಈ ನಡುವೆ ಸಚಿನ್ ಪೈಲಟ್ ಸೇರಿದಂತೆ 19 ಕಾಂಗ್ರೆಸ್ ಬಂಡಾಯ ಶಾಸಕರ ವಿರುದ್ಧ ಸದ್ಯಕ್ಕೆ ಸ್ಪೀಕರ್ ಯಾವುದೇ ನಿರ್ಧಾರ ಕೈಗೊಳ್ಳುವಂತಿಲ್ಲ ಎಂದು ರಾಜಸ್ತಾನ ಹೈಕೋರ್ಟ್ ಆದೇಶ ನೀಡಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button