
ಪ್ರಗತಿವಾಹಿನಿ ಸುದ್ದಿ; ಜೈಪುರ: ಟಿಪ್ಪರ್ ಚಾಲಕನ ಬೇಜವಾಬ್ದಾರಿತನಕ್ಕೆ ಒಂದಿಡೀ ಕುಟುಂಬವೇ ದಾರುನವಾಗಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಮನೆಯ ಹೊರಗೆ ಮಲಗಿದ್ದವರ ಮೇಲೆ ಟಿಪ್ಪರ್ ವಾಹನವೊಂದು ಹರಿದಿದೆ. ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ರಾಜಸ್ಥಾನದ ಜಲವಾಡ್ ನಲ್ಲಿ ಈ ದುರಂತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ವಾಹನ ರಸ್ತೆ ಪಕ್ಕದ ಮನೆಯ ಹೊರ ಭಾಗದಲ್ಲಿ ಮಲಗಿದ್ದವರ ಮೇಲೆ ಹರಿದಿದೆ ಎನ್ನಲಾಗಿದೆ. ದುರ್ಘಟನೆಯಲ್ಲಿ ಮೂವರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ.
ಯೋಗೇಶ್ ಗೌಡ ಹತ್ಯೆ ಪ್ರಕರಣ; ಕೆಎಎಸ್ ಅಧಿಕಾರಿ ಬಂಧನ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ