Cancer Hospital 2
Bottom Add. 3

*ಭೀಕರ ಅಪಘಾತ; ಐವರು ಪೊಲೀಸ್ ಅಧಿಕಾರಿಗಳು ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಜೈಪುರ: ಟ್ರಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಪೊಲೀಸ್ ಅಧಿಕಾರಿಗಳು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಜುಂಜುನುವಿನಲ್ಲಿ ನಡೆದಿದೆ.

ನಗೌರ್ ಜಿಲ್ಲೆಯ ಕಣುತ ಗ್ರಾಮದ ಬಳಿ ಈ ದುರಂತ ಸಂಭವಿಸಿದೆ. ಅಪಘಾತದಲ್ಲಿ ಐವರು ಪೊಲೀಸರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ಜುಂಜುನುವಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ರ್ಯಾಲಿ ಏರ್ಪಡಿಸಲಾಗಿದ್ದು, ರ್ಯಾಲಿಗೆ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಪೊಲೀಸ್ ಸಿಬ್ಬಂದಿಗಳು ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಘಟನೆ ಬಗ್ಗೆ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ತೀವ್ರ ಸಂತಾಪ ಸೂಚಿಸಿದ್ದಾರೆ. ಮೃತ ಪೊಲೀಸರ ಕುಟುಂಬದವರಿಗೆ ದು:ಖ ಬರಿಸುವ ಶಕ್ತಿ ದೇವರು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

Bottom Add3
Bottom Ad 2

You cannot copy content of this page