
ಪ್ರಗತಿವಾಹಿನಿ ಸುದ್ದಿ: ಚಲಿಸುತ್ತಿದ್ದ ಕಾರು ರಿಂಗ್ ರಸ್ತೆಯಿಂದ ನೀರು ತುಂಬಿದ್ದ ಅಂದರ್ ಪಾಸ್ ಗೆ ಬಿದ್ದ ಪರಿಣಾಮ ದುರಂತದಲ್ಲಿ 7 ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ.
ರಾಜಸ್ಥಾನದ ಜೈಪುರದಲ್ಲಿ ಈ ಅಪಘಾತ ಸಂಭವಿಸಿದೆ. ಇಬ್ಬರು ಮಕ್ಕಳು ಸೇರಿ 7 ಜನರು ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದವರು ಹರಿದ್ವಾರದಲ್ಲಿ ಅಂತ್ಯಸಂಸ್ಕಾರ ಮುಗಿಸಿ ವಾಪಾಸ್ ಆಗುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದ್ದು ದುರಂತಕ್ಕೀಡಾಗಿದ್ದಾರೆ.
ಮೃತದೇಹಗಳನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.