Latest

ಮಾಜಿ ಮುಖ್ಯಮಂತ್ರಿ ಕೊರೊನಾಗೆ ಬಲಿ

ಪ್ರಗತಿವಾಹಿನಿ ಸುದ್ದಿ; ಜೈಪುರ: ರಾಜಸ್ಥಾನ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ಮುಖಂಡ ಜಗನ್ನಾಥ್ ಪಹಾಡಿಯಾ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

89 ವರ್ಷದ ಜಗನ್ನಾಥ್ ಪಹಾಡಿಯಾ ಕೊರೊನಾ ಸೋಂಕಿನಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ.

Home add -Advt

ಪಹಾಡಿಯಾ ನಿಧನಕ್ಕೆ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಸಂತಾಪ ಸೂಚಿಸಿದ್ದು, ಪಹಾಡಿಯಾ ಕೋವಿಡ್ ಗೆ ಬಲಿಯಾಗಿರುವುದು ಆಘಾತ ತಂದಿದೆ. ಮಾಜಿ ಮುಖ್ಯಮಂತ್ರಿಯಾಗಿ, ರಾಜ್ಯಪಾಲರಾಗಿ ಹಾಗೂ ಕೇಂದ್ರ ಸಚಿವರಾಗಿಯೂ ದೇಶಕ್ಕೆ ಸಲ್ಲಿಸಿದ ಸೇವೆ ಅಪಾರ. ಮಾಜಿ ಸಿಎಂ ಅಗಲಿಕೆ ಹಿನ್ನೆಲೆಯಲ್ಲಿ ರಾಜಸ್ಥಾನದಲ್ಲಿ ಒಂದು ದಿನದ ಶೋಕಾಚರಣೆ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.

ಜಗನ್ನಾಥ್ ಪಹಾಡಿಯಾ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಸೇರಿದಂತೆ ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ.

Related Articles

Back to top button