
ಪ್ರಗತಿವಾಹಿನಿ ಸುದ್ದಿ; ಜೈಪುರ: ಯುವಕರ ಕಿರುಕುಳಕ್ಕೆ ಬೇಸತ್ತ ಸಹೋದರಿಯರಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದ ಪ್ರತಾಪಗಢದಲ್ಲಿ ನಡೆದಿದೆ.
ಅಪ್ರಾಪ್ತ ಸಹೋದರಿಯರಿಬ್ಬರೂ ಹಾಸ್ಟೇಲ್ ನಲ್ಲಿದ್ದುಕೊಂಡು ವ್ಯಾಸಂಗ ಮಾಡುತ್ತಿದ್ದರು. ಮೂವರು ಯುವಕರ ಕಿರುಕುಳಕ್ಕೆ ನೊಂದ ಇಬ್ಬರೂ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಾಲಕಿಯರು ವಿಷ ಸೇವಿಸಿದು ತಿಳಿಯುತ್ತಿದ್ದಂತೆ ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಷ್ಟರಲ್ಲೇ ಅವರು ಮೃತಪಟ್ಟಿದ್ದರು. ಯುವತಿಯರ ತಂದೆ ಸ್ಥಳೀಯ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ಸಂಬಂಧ ಮೂವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಘಟನೆ ಬೆನ್ನಲ್ಲೇ ವಿಪಕ್ಷ ಬಿಜೆಪಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದು, ಈ ಘಟನೆ ರಾಜ್ಯದ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ಅಶೋಕ್ ಗೆಹ್ಲೋಟ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ