Latest

ನೂಪುರ್ ಶರ್ಮಾ ಹೇಳಿಕೆಗೆ ಖಂಡನೆ; ಬಿಜೆಪಿ ಕೌನ್ಸಿಲರ್ ರಾಜೀನಾಮೆ

ಪ್ರಗತಿವಾಹಿನಿ ಸುದ್ದಿ; ಜೈಪುರ: ಪ್ರವಾದಿ ಮೊಹಮ್ಮದ್ ಪೈಗಂಬರ್ ಬಗ್ಗೆ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಹೇಳಿಕೆ ಖಂಡಿಸಿ ಪುರಸಭೆ ಬಿಜೆಪಿ ಸದಸ್ಯರೊಬ್ಬರು ರಾಜೀನಾಮೆ ನೀಡಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.

ದಕ್ಷಿಣ ಕೋಟಾ ಮುನ್ಸಿಪಲ್ ಕಾರ್ಪೊರೇಷನ್ ವಾರ್ಡ್ ಸಂಖ್ಯೆ 14 ರ ಬಿಜೆಪಿಯ ಕೌನ್ಸಿಲರ್ ತಬಸ್ಸುಮ್ ಮಿರ್ಜಾ ತಮ್ಮ ರಾಜೀನಾಮೆ ಪತ್ರವನ್ನು ಪಕ್ಷದ ರಾಜ್ಯ ಘಟಕದ ಮುಖ್ಯಸ್ಥ ಸತೀಶ್ ಪೂನಿಯಾ ಹಾಗೂ ಕೋಟಾ ಜಿಲ್ಲಾ ಅಧ್ಯಕ್ಷ ಕ್ರಿಶನ್ ಕುಮಾರ್ ಸೋನಿ ಅವರಿಗೆ ಕಳುಹಿಸಿದ್ದಾರೆ.

ಸುಮಾರು 10 ವರ್ಷಗಳ ಹಿಂದೆ ಬಿಜೆಪಿಗೆ ಸೇರ್ಪಡೆಯಾಗಿದ್ದ ತಬಸ್ಸುಮ್, ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ. ನಾನು ಬಿಜೆಪಿಯಲ್ಲಿ ಮುಂದುವರೆದರೆ ನೂಪುರ್ ಅವರ ಪ್ರವಾದಿ ವಿರುದ್ಧದ ಹೇಳಿಕೆಯನ್ನು ಬೆಂಬಲಿಸಿದರೆ ನನಗಿಂತ ದೊಡ್ಡ ಅಪರಾಧಿ ಮತ್ತೊಬ್ಬರಿಲ್ಲ. ಈಗ ನನ್ನ ಪ್ರಜ್ಞೆ ಜಾಗೃತಗೊಂಡಿದೆ. ನಾನು ಇನ್ನುಮುಂದೆ ಪಕ್ಷದಲ್ಲಿ ಮುಂದುವರೆಯಲ್ಲ ಎಂದು ತಿಳಿಸಿದ್ದಾರೆ.
ಬಿಜೆಪಿ ಶಾಸಕರಿಂದ ಕಿರುಕುಳ, ದಬ್ಬಾಳಿಕೆ; ನಾಲ್ವರಿಂದ ಆತ್ಮಹತ್ಯೆಗೆ ಯತ್ನ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button