Kannada NewsKarnataka NewsLatest

*ಹೃದಯಾಘಾತದಿಂದ ಪತ್ನಿ ಸಾವು; ಮನನೊಂದು ಆತ್ಮಹತ್ಯೆಗೆ ಶರಣಾದ ಪತಿ*

ಪ್ರಗತಿವಾಹಿನಿ ಸುದ್ದಿ: ಪತ್ನಿ ಹೃದಯಾಘಾತದಿಂದ ಮೃತಪಟ್ಟ ಬೆನ್ನಲ್ಲೇ ಮನನೊಂದ ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕೊಣಾಜೆಯ ಗ್ರಾಮಚಾವಡಿಯಲ್ಲಿ ನಡೆದಿದೆ.

ಮೀನಾಕ್ಷಿ ಹಾಗೂ ಸೇಸಪ್ಪ ಪೂಜಾರಿ ಮೃತ ದಂಪತಿ. ಪತ್ನಿ ಮೀನಾಕ್ಷಿ ಕೆಲ ತಿಂಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಬಳಿಕ ಗುಣಮುಖರಾಗಿದ್ದರು. ಬುಧವಾರ ಎದೆನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಮೀನಾಕ್ಷಿ ಅವರು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದರು.

Home add -Advt

ಪತ್ನಿ ಸಾವಿನಿಂದ ತೀವ್ರವಾಗಿ ಮನನೊಂದಿದ್ದ ಸೇಸಪ್ಪ ಮನೆಗೆ ಬಂದು ವಿಷ ಸೇವಿಸಿದ್ದರು ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ನೆರೆಮನೆಯವರು ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಮಾರ್ಗ ಮಧ್ಯೆಯೇ ಸೇಸಪ್ಪ ಸಾವನ್ನಪ್ಪಿದ್ದಾರೆ.

ಸ್ಕೂಲ್ ಬಸ್ ಚಾಲಕರಾಗಿ ಕೆಲಸ ಮಾಡುತ್ತಿದ್ದ ಸೇಸಪ್ಪ ದಂಪತಿಗೆ ಮಕ್ಕಳಿರಲಿಲ್ಲ ಎನ್ನಲಾಗಿದೆ. ಒಟ್ಟಿಗೆ ಮೃತ ದಂಪತಿಯ ಅಂತ್ಯಕ್ರಿಯೆ ನೆರವೇರಿಸಲಾಗಿದ್ದು, ಪತಿ-ಪತ್ನಿ ಸಾವಿನಲ್ಲಿಯೂ ಜೊತೆಯಾಗಿದ್ದಾರೆ.

Related Articles

Back to top button