Film & Entertainment

*ಇಬ್ಬರು ಬಿಗ್ ಬಾಸ್ ಸ್ಪರ್ಧಿಗಳ ಮೇಲೆ FIR ದಾಖಲು*

ಪ್ರಗತಿವಾಹಿನಿ ಸುದ್ದಿ : ಬಿಗ್ ಬಾಸ್ ಸೀಸನ್ 11ರ ಸ್ಪರ್ಧಿ ಬುಜ್ಜಿ ರಜತ್ ಹಾಗೂ ಮಾಜಿ ಸ್ಪರ್ಧಿ ವಿನಯ್ ಗೌಡ ವಿರುದ್ಧ ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ರಜತ್ ಕಿಶನ್ ಜೊತೆ ನಟ ವಿನಯ್ ಗೌಡ ರೀಲ್ಸ್ ಮಾಡಿದ್ದಾರೆ. ಈ ರೀಲ್ಸ್‌ನಲ್ಲಿ ವಿನಯ್ ಗೌಡ ಲಾಂಗ್ ಹಿಡಿದು, ಕಣ್ಣಿಗೆ ಕೂಲಿಂಗ್ ಗ್ಲಾಸ್ ಹಾಕಿಕೊಂಡು ಪರ್ಫಾಮೆನ್ಸ್ ಮಾಡಿದ್ದಾರೆ. ದರ್ಶನ್ ‘ಮೆಜೆಸ್ಟಿಕ್’ ಸಿನಿಮಾದ ಸ್ಟೈಲ್‌ನಲ್ಲಿ ಫ್ಲೋ ಮೋಷನ್‌ನಲ್ಲಿ ನಡೆದಿದ್ದಾರೆ. ನಟನ ಕೈಯಲ್ಲಿ ಮಾರಕಾಸ್ತ್ರಗಳಿದ್ದು, ಸಮಾಜಕ್ಕೆ ತಪ್ಪ ಸಂದೇಶ ಹೋಗುತ್ತದೆ ಎಂಬ ಕಾರಣಕ್ಕೆ ಇದೀಗ ಕೇಸ್ ದಾಖಲಾಗಿದೆ. ಸದ್ಯ ಈ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗ್ತಿದೆ. 

ಬಸವೇಶ್ವರ ನಗರ ಪೊಲೀಸರು, ಇಬ್ಬರ ವಿರುದ್ಧ ಆರ್ಮ್ಸ್ ಆಕ್ಟ್ ಆಡಿ ಕೇಸ್ ದಾಖಲಿಸಿದ್ದಾರೆ. ಸಾರ್ವಜನಿಕವಾಗಿ ಮಾರಕಾಸ್ತ್ರಗಳನ್ನು ಹಿಡಿದು ರಿಲ್ಸ್ ಮಾಡುವುದು, ಭಯದ ವಾತಾವರಣ ಸೃಷ್ಟಿಸೋದು ಕಾನೂನು ಪ್ರಕಾರ ಅಪರಾಧವಾಗಿದೆ. ಈ ನಿಟ್ಟಿನಲ್ಲಿ ಈ ಇಬ್ಬರ ಸ್ಪರ್ಧಿಗಳ ಮೇಲೆ ಎಫ್‌ಐಆ‌ರ್ ದಾಖಲಿಸಿದ್ದಾರೆ.

Home add -Advt

Related Articles

Back to top button