Latest

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾವನಾತ್ಮಕ ಟ್ವಿಟ್

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಇಂದು ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ಅವರ 75ನೇ ಜಯಂತಿ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ತಂದೆಯ ಬಗ್ಗೆ ಭಾವನಾತ್ಮಕವಾಗಿ ಟ್ವಿಟ್ ಮಾಡಿದ್ದಾರೆ.

ರಾಜೀವ್ ಗಾಂಧಿಓರ್ವ ದೂರ ದೃಷ್ಟಿಯುಳ್ಳ ನಾಯಕಾರಗಿದ್ದರು. ಭವಿಷ್ಯದ ದೃಷ್ಟಿಕೋನದಲ್ಲಿ ಕೆಲಸ ಮಾಡುವ ವ್ಯಕ್ತಿಯಾಗಿದ್ದರು. ಇದೆಲ್ಲಕ್ಕಿಂತ ಮಿಗಿಲಾಗಿ ಉದಾರ ಮತ್ತು ಪ್ರೀತಿಯ ಸ್ನೇಹ ಜೀವಿಯಾಗಿದ್ದರು. ಅವರನ್ನ ತಂದೆಯಾಗಿ ಪಡೆದ ನಾನು ಅದೃಷ್ಟವಂತ ಹಾಗೂ ಹೆಮ್ಮೆ ಪಡುತ್ತೇನೆ. ಪ್ರತಿದಿನ ನಾನು ತಂದೆಯನ್ನು ಮಿಸ್ ಮಾಡಿಕೊಳ್ಳುತ್ತೇನೆ ಎಂದು ಬರೆದಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ರಾಜೀವ್ ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿಗಳಿಗೆ ನಮನಗಳನ್ನು ಸಲ್ಲಿಸಿದ್ದಾರೆ. ಟೆಲಿಕಾಂ ಕ್ರಾಂತಿ, ಕಂಪ್ಯೂಟರೀಕರಣ, ಪಂಚಾಯತ್ ರಾಜ್, ಮತದಾನ ವಯಸ್ಸಿನ ಇಳಿಕೆ ಮೊದಲಾದ ಕಾರ್ಯಕ್ರಮಗಳ ಮೂಲಕ ಬಲಶಾಲಿಯಾದ ಆಧುನಿಕ ಭಾರತ ಕಟ್ಟಿದ, ನಮಗೆಲ್ಲ ಅಭಿವೃದ್ದಿಯ ದಾರಿ ತೋರಿದ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರಿಗೆ ಹುಟ್ಟುಹಬ್ಬದ ದಿನದ ಗೌರವಪೂರ್ವಕ ನಮನಗಳು ಎಂದಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button