ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿದೇಶಿ ಧನಸಹಾಯ ಕಾನೂನು ಉಲ್ಲಂಘನೆ ಹಿನ್ನೆಲೆಯಲ್ಲಿ ರಾಜೀವ್ ಗಾಂಧಿ ಫೌಂಡೇಶನ್ ಸಂಸ್ಥೆ ಲೈಸನ್ಸ್ ನ್ನು ಕೇಂದ್ರ ಸರ್ಕಾರ ರದ್ದು ಮಾಡಿದೆ.
ಸಂಸ್ಥೆಗೆ ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ ಅಡಿಯಲ್ಲಿ ನೀಡಿದ್ದ ಲೈಸೆನ್ಸ್ ನ್ನು ಕೇಂದ್ರ ಗೃಹ ಇಲಾಖೆ ರದ್ದು ಮಾಡಿದೆ. 2020ರಲ್ಲಿ ಕೇಂದ್ರ ಗೃಹ ಇಲಾಖೆ ರಾಜೀವ್ ಗಾಂಧಿ ಪ್ರತಿಷ್ಠಾನದ ಕಾರ್ಯನಿರ್ವಹಣೆ ಕುರಿತು ಪರಿಶೀಲಿಸಲು ಸಮಿತಿಯೊಂದನ್ನು ರಚಿಸಿತ್ತು. ಈ ಸಮಿತಿಯ ವರದಿಯನ್ನು ಆಧರಿಸಿ ಪ್ರತಿಷ್ಠಾನಕ್ಕೆ ನೀಡಿದ್ದ ಲೈಸನ್ಸ್ ರದ್ದುಪಡಿಸಿದೆ.
ರಾಜೀವ್ ಗಾಂಧಿ ಫೌಂಡೇಶನ್ ಗೆ ಸೋನಿತಾ ಗಾಂಧಿ ಅಧ್ಯಕ್ಷರಾಗಿದ್ದರು. ಪ್ರಿಯಾಂಕಾ ಗಾಂಧಿ ವಾದ್ರಾ, ರಾಹುಲ್ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ಪಿ.ಚಿದಂಬರಂ ಟ್ರಸ್ಟಿಗಳಾಗಿದ್ದರು.
https://pragati.taskdun.com/politics/kalaburgijanasankalpa-samaveshapostpone/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ