Latest

ರಾಜೀವ್ ಗಾಂಧಿ ಹತ್ಯೆ ಅಪರಾಧಿಗಳ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹತ್ಯೆಗೈದ 6 ಅಪರಾಧಿಗಳನ್ನು ಸುಪ್ರೀಂ ಕೋರ್ಟ್ ಬಿಡುಗಡೆಗೊಳಿಸಲು ಆದೇಶ ಹೊರಡಿಸಿದೆ.

ಎಲ್ಲಾ 6 ದೋಷಿಗಳ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ರಾಜೀವ್ ಗಾಂಧಿ ಹತ್ಯೆ ಮಾಡಿದ್ದ ಪ್ರಮುಖ ಅಪರಾಧಿ ನಳಿನಿ, ರವಿಚಂದ್ರನ್, ರಾಬರ್ಟ್, ಜಯಕುಮಾರ್, ಸಂತನ್, ಮುರುಗನ್ ಸೇರಿ 6 ಅಪರಾಧಿಗಳನ್ನು ಬಿಡುಗಡೆಗೊಳಿಸಲು ಆದೇಶಿಸಲಾಗಿದೆ.

ಸುಪ್ರೀಂ ಕೋರ್ಟ್ ಆದೇಶ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ನಳಿನಿ, ಸರ್ವೋಚ್ಛ ನ್ಯಾಯಾಲಯಕ್ಕೆ ಧನ್ಯವಾದ ತಿಳಿಸಿದ್ದಾಲೆ. ಈಗಾಗಲೇ ನಾವು 32 ವರ್ಷಗಳ ಜೈಲು ಶಿಕ್ಷೆ ಅನುಭವಿಸಿದ್ದೇವೆ. ತಾನು ನಿರಪರಾಧಿ. ಯಾವ ಭಯೋತ್ಪಾದಕಿಯೂ ನಾನಲ್ಲ ಎಂದು ಸಮರ್ಥಿಸಿಕೊಂಡಿದ್ದಾಳೆ.
ವಿಧವೆಯನ್ನು ವಿವಾಹವಾಗಿ ವಂಚಿಸಿದ ಸೈನಿಕ; ಮತ್ತೊಂದು ಮದುವೆಗೆ ರೆಡಿಯಾಗಿ ಸಿಕ್ಕಿಬಿದ್ದ

https://pragati.taskdun.com/latest/hasanasoldiercheating2nd-marriage/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button