Latest

ಬೊಮ್ಮಾಯಿ ಅವರದ್ದು ಸಮರ್ಥ ನಾಯಕತ್ವ: ಕೇಂದ್ರ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಶ್ಲಾಘನೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯವು ತನ್ನ ಸಮರ್ಥ ಹಾಗೂ ದಕ್ಷ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಪ್ರಗತಿ ಸಾಧಿಸುತ್ತಿದ್ದು, ಅತಿ ಶೀಘ್ರದಲ್ಲಿಯೇ ವಿಶ್ವದಲ್ಲಿ ತನ್ನ ಅಸ್ಮಿತೆಯನ್ನು ಸ್ಥಾಪಿಸುವಲ್ಲಿ ಯಶಸ್ವಿಯಾಗಲಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ತಿಳಿಸಿದರು.

ಅವರು ಇಂದು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ ಫ್ಲೈಟ್ ಕಂಟ್ರೋಲ್ ಸಿಸ್ಟಮ್ ಕಾಂಪ್ಲೆಕ್ಸ್ ಉದ್ಘಾಟಿಸಿ ಮಾತನಾಡುತ್ತಿದ್ದರು.

Home add -Advt

ದೇಶದ ಪ್ರಗತಿಗೆ ಸಂಬಂಧಿಸಿದಂತೆ ಬೊಮ್ಮಾಯಿ ಅವರಿಗಿರುವ ಬದ್ದತೆ ಪ್ರಶ್ನಾತೀತ ವಾಗಿದೆ ಎಂದರು.

ಕರ್ನಾಟಕ ಹೃದಯಕ್ಕೆ ಹತ್ತಿರ:
ಕರ್ನಾಟಕ ಹಾಗೂ ರಾಜಧಾನಿ ಬೆಂಗಳೂರು ಯಾವಾಗಲೂ ನಮ್ಮ ಹೃದಯಕ್ಕೆ ಬಹಳ ಹತ್ತಿರ. ಈ ರಾಜ್ಯ ವಿಶಾಲವಾದ ಆಲದ ಮರವಿದ್ದಂತೆ. ತನ್ನ ಸಂಸ್ಕೃತಿ ಹಾಗೂ ಪರಂಪರೆಯ ಬೇರುಗಳನ್ನು ನೆಲದಾಳಕ್ಕೆ ಬಿಟ್ಟಿದ್ದರೆ, ಆಧುನಿಕ ತಂತ್ರಜ್ಞಾನ ಅಭಿವೃದ್ಧಿಗೆ ಪ್ರಮುಖ ಕೇಂದ್ರವೂ ಆಗಿದ್ದು, ಆಕಾಶದೆತ್ತರಕ್ಕೆ ತನ್ನ ಶಾಖೆಗಳನ್ನು ಚಾಚಿದೆ ಎಂದರು.

ಎಫ್.ಸಿ.ಎಸ್ ಕಟ್ಟಡವನ್ನು ಅತ್ಯುತ್ತಮವಾಗಿ ಶ್ರದ್ಧೆಯಿಂದ ಕಟ್ಟಲಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಅವರು ಕೇವಲ 45 ದಿನಗಳಲ್ಲಿ ಕಟ್ಟಡ ನಿರ್ಮಾಣ ವಾಗಿರುವುದು ಶ್ಲಾಘನೀಯ ಎಂದರು.

89 ಲಕ್ಷ ರೂ. ವೆಚ್ಚದಲ್ಲಿ ರಸ್ತೆಗಳ ಅಭಿವೃದ್ಧಿ: ಪೂಜೆ ನೆರವೇರಿಸಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್

Related Articles

Back to top button