Kannada NewsKarnataka NewsLatestPolitics

*ನಾನು ಆಪರೇಷನ್ ಆಗೋಕೆ ಕ್ಯಾನ್ಸರ್ ಬಂದಿಲ್ಲ ಎಂದ ರಾಜು ಗೌಡ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಾನು ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ. ಆದರೆ ನಮ್ಮ ಪಕ್ಷದಲ್ಲಿಯೂ ಕೆಲ ಅಸಮಾಧಾನ, ಬೇಸರವಿರುವುದು ಸತ್ಯ ಎಂದು ಮಾಜಿ ಶಾಸಕ ರಾಜು ಗೌಡ ತಿಳಿಸಿದಾರೆ.

ನಟ ಕಿಚ್ಚ ಸುದೀಪ್ ಹುಟ್ಟುಹಬ್ಬದ ಸಂಭ್ರಮಾಚರಣೆ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ವಿಚಾರವಾಗಿ ಮಾತನಾಡಿದ ಮಾಜಿ ಶಾಸಕ ರಾಜು ಗೌಡ, ನಾನು ಯಾವುದೇ ಆಪರೇಷನ್ ಹಸ್ತಕ್ಕೆ ಒಳಗಾಗುವ ಪ್ರಶ್ನೆಯೇ ಇಲ್ಲ. ನಾನು ಆಪರೇಷನ್ ಆಗೊಕೆ ಕ್ಯಾನ್ಸರ್ ಬಂದಿಲ್ಲ, ಯಾವ ಗಡ್ಡೆಯೂ ಆಗಿಲ್ಲ ಎಂದು ಟಾಂಗ್ ನೀಡಿದರು.

ನಟ ಸುದೀಪಣ್ಣನ ಬರ್ತ್ ಡೇ ಹಿನ್ನೆಲೆಯಲ್ಲಿ ಖಾಸಗಿ ಹೋಟೆಲ್ ನಲ್ಲಿ ಕಾರ್ಯಕ್ರಮವಿತ್ತು. ಫಿಲ್ಮ್ ಪ್ರೊಡ್ಯೂಸರ್, ನಟರು, ರಾಜಕೀಯ ನಾಯಕರು ಭಾಗಿಯಾಗಿದ್ದರು. ಈ ವೇಳೆ ಡಿ.ಕೆ.ಶಿವಕುಮಾರ್ ಕೂಡ ಆಗಮಿಸಿದ್ದರು. ಡಿ.ಕೆ.ಶಿವಕುಮಾರ್ ಜೊತೆ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ. ನನಗೆ ಕಾಂಗ್ರೆಸ್ ಗೆ ಆಹ್ವಾನವೂ ಇಲ್ಲ, ಯಾರ ಸಂಪರ್ಕವೂ ಇಲ್ಲ ಎಂದರು.

ಚೆನ್ನಾಗಿ ಕೆಲಸ ಮಾಡಿದ್ದರೂ ರಾಜು ಯಾಕೆ ಸೋತೆ ಎಂದು ಡಿ.ಕೆ.ಶಿವಕುಮಾರ್ ಕೇಳಿದರು. ನಿಮ್ಮ ಹಾಗೂ ಸಿಎಂ ಸಿದ್ದರಾಮಯ್ಯನವರ ಪ್ರಭಾವ ಎಂದು ಹೇಳಿದೆ. ಬೇರೆ ಯಾವುದೇ ರಾಜಕೀಯ ಚರ್ಚೆ ಆಗಿಲ್ಲ ಎಂದು ತಿಳಿಸಿದ್ದಾರೆ.

Home add -Advt

ಇದೇ ವೇಳೆ ನಮ್ಮ ಪಕ್ಷದಲ್ಲಿಯೂ ಅಸಮಾಧಾನ, ಬೇಸರ ಇದೆ. ಸಭೆಯಲ್ಲಿ ವಿಪಕ್ಷ ನಾಯಕನ, ರಾಜ್ಯಾಧ್ಯಕ್ಷ ಆಯ್ಕೆ ಮಾಡಿ ಎಂದು ಹೇಳಿದ್ದೇವೆ. ಪಕ್ಷದ ವೇದಿಕೆಯಲ್ಲಿ ನಾನು ಎಲ್ಲಾ ವಿಚಾರಗಳನ್ನು ಮಾತನಾಡಿದ್ದೇನೆ ಎಂದು ತಿಳಿಸಿದರು.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button