Karnataka NewsLatest

ರಾಜು ಟೋಪಣ್ಣವರ್ ಬಿಜೆಪಿಗೆ ಗುಡ್ ಬೈ

ಪ್ರಧಾನಿ ನರೇಂದ್ರ ಮೋದಿ ಅವರ ದೊಡ್ಡ ಅಭಿಮಾನಿ ನಾನು. ಅವರು ದೇಶಕ್ಕಾಗಿ ಹಾಗೂ ರಾಜ್ಯಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಆದರೆ

 ಬಿಜೆಪಿಯ ಕೆಲ ಶಾಸಕರು ಅವರ ಯೋಜನೆ ಅನುಷ್ಠಾನಗೊಳಿಸಿ ಸಾರ್ವಜನಿಕರಿಗೆ ತಲುಪಿಸುವಲ್ಲಿ ವಿಫಲರಾಗಿದ್ದಾರೆ.

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಬೆಳಗಾವಿ ಮಹಾನಗರ ಘಟಕದ ಬಿಜೆಪಿ ಮಾಜಿ ಪ್ರಧಾನ ಕಾರ್ಯದರ್ಶಿ ರಾಜಕುಮಾರ ಟೋಪಣ್ಣವರ ಬಿಜೆಪಿ ತೊರೆದು ಶುಕ್ರವಾರ ಬೆಂಗಳೂರಿನಲ್ಲಿ ಆಮ್ ಆದ್ಮಿ ಪಾರ್ಟಿ ಸೇರ್ಪಡೆಗೊಂಡರು.
ಬೆಳಗಾವಿ ಸೇರಿದಂತೆ ಹುಬ್ಬಳ್ಳಿ-ಧಾರವಾಡ, ವಿಜಯಪುರ, ಬಾಗಲಕೋಟ ಜಿಲ್ಲೆಗಳಲ್ಲಿ ಆಮ್ ಆದ್ಮಿ ಪಕ್ಷ ಸಂಘಟನೆ ಜವಾಬ್ದಾರಿ ತೆಗೆದುಕೊಂಡಿರುವ ರಾಜಕುಮಾರ ಟೋಪಣ್ಣವರ ಬೇರು ಮಟ್ಟದಲ್ಲಿ ಪಕ್ಷ ಸಂಘಟನೆ ಮಾಡಿ ದೆಹಲಿಯ ಸಿಎಂ ಅರವಿಂದ ಕ್ರೇಜಿವಾಲ್ ಅವರ ಕೈ ಬಲಪಡಿಸುವ ಪ್ರಯತ್ನ ಮಾಡುವುದಾಗಿ ತಿಳಿಸಿದರು.
ಉತ್ತರ ಕರ್ನಾಟಕದಲ್ಲಿ ಸಾಕಷ್ಟು ಕೈಗಾರಿಕೆಗಳಿದ್ದರೂ ಸ್ಥಳೀಯ ಮಟ್ಟದಲ್ಲಿ ಉದ್ಯೋಗಕ್ಕಾಗಿ ಬೇರೆ ಕಡೆ ವಲಸೆ ಹೋಗುತ್ತಿದ್ದಾರೆ. ನಮ್ಮ ಭಾಗದ ಜನರಿಗೆ ನಾನು ಏನಾದರೂ ಮಾಡಬೇಕೆಂಬ ಬಯಕೆ ನನಗೆ ಇದೆ. ಆದ್ದರಿಂದ ಬಿಜೆಪಿ ತೊರೆದು ಆಮ್ ಆದ್ಮಿ ಪಾರ್ಟಿ ಸೇರ್ಪಡೆಯಾದೆ ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರ ದೊಡ್ಡ ಅಭಿಮಾನಿ ನಾನು. ಅವರು ದೇಶಕ್ಕಾಗಿ ಹಾಗೂ ರಾಜ್ಯಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಆದರೆ ಬಿಜೆಪಿಯ ಕೆಲ ಶಾಸಕರು ಅವರ ಯೋಜನೆ ಅನುಷ್ಠಾನಗೊಳಿಸಿ ಸಾರ್ವಜನಿಕರಿಗೆ ತಲುಪಿಸುವಲ್ಲಿ ವಿಫಲರಾಗಿದ್ದಾರೆ. ಆಮ್ ಆದ್ಮಿ ಪಕ್ಷ ನನಗೆ ನೀಡಿರುವ ಜವಾಬ್ದಾರಿಯನ್ನು ಪ್ರಮಾಣಿಕವಾಗಿ ನಿಭಾಯಿಸುವುದಾಗಿ ಅವರು ತಿಳಿಸಿದರು.
ಆಮ್ ಆದ್ಮಿ ಪಕ್ಷದ ಮುಖಂಡ ಪೃಥ್ವಿ ರೆಡ್ಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button