Latest

ರಾಜ್ಯಸಭೆಗೆ ಸ್ಪರ್ಧಿಸುವ ಬಗ್ಗೆ ದೇವೇಗೌಡರ ನಿರ್ಧಾರವೇ ಅಂತಿಮ: ಹೆಚ್ ಡಿಕೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯಸಭಾ ಸ್ಥಾನಗಳಿಗೆ ಜೂನ್ 19ರಂದು ಚುನಾವಣೆ ನಡೆಯಲಿದ್ದು, ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಅಭ್ಯರ್ಥಿ ಆಯ್ಕೆಯಲ್ಲಿ ನಿರತವಾಗಿವೆ. ಕಾಂಗ್ರೆಸ್ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದ್ದು, ಜೆಡಿಎಸ್​ನಲ್ಲಿ ಹೆಚ್ ಡಿ ದೇವೇಗೌಡರನ್ನೇ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ಒತ್ತಾಯ ಕೇಳಿಬಂದಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ರಾಜ್ಯಸಭೆಗೆ ಸ್ಪರ್ಧಿಸಲು ದೇವೇಗೌಡರು ಇನ್ನೂ ಒಪ್ಪಿಗೆ ಸೂಚಿಸಿಲ್ಲ. ಅವರ ನಿರ್ಧಾರವೇ ಅಂತಿಮ ಎಂದು ಹೇಳಿದ್ದಾರೆ.

ರಾಜ್ಯಸಭೆಗೆ ದೇವೇಗೌಡರೇ ನಿಲ್ಲಬೇಕು ಎಂದು ಪಕ್ಷದದ ಎಲ್ಲಾ ಶಾಸಕರು ಒತ್ತಾಯಿಸಿದ್ದಾರೆ. ಆದರೆ, ದೇವೇಗೌಡರು ರಾಜಸಭೆಗೆ ನಿಲ್ಲುವ ಬಗ್ಗೆ ಇದುವರೆಗೂ ಒಪ್ಪಿಗೆ ಕೊಟ್ಟಿಲ್ಲ. ದೇವೇಗೌಡರ ದುಡಿಮೆ ಹಾಗೂ ದೇಶದ ಪರಿಸ್ಥಿತಿಯಿಂದ ರಾಜ್ಯಸಭೆಗೆ ಅವರ ಅವಶ್ಯಕತೆ ಇದೆ. ದೇವೇಗೌಡರು ಅನುಭವಿ ರಾಜಕಾರಣಿ. ಅವರು ದೆಹಲಿಗೆ ಹೋಗಬೇಕೆಂಬುದು ಶಾಸಕರ ಒತ್ತಾಯ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಕಾಂಗ್ರೆಸ್​ನಿಂದ ಒಬ್ಬ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಬಹುದು. ಬಿಜೆಪಿಯಿಂದ ಇಬ್ಬರು ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಬಹುದು. 3ನೇ ಅಭ್ಯರ್ಥಿಯನ್ನು ಕಣಕ್ಕಿ ಇಳಿಸಲು ಬಿಜೆಪಿ, ಕಾಂಗ್ರೆಸ್ ಪಕ್ಷಕ್ಕೆ ಸಂಖ್ಯೆಯ ಕೊರತೆ ಇದೆ. ಎರಡೂ ಪಕ್ಷವನ್ನ ನೋಡಿದಾಗ ನಮಲ್ಲಿ ಸಂಖ್ಯಾ ಬಲ ಜಾಸ್ತಿ ಇದೆ. ಕಾಂಗ್ರೆಸ್, ಬಿಜೆಪಿಯಲ್ಲೂ ಅಭ್ಯರ್ಥಿಯನ್ನು ಹಾಕಿದಾಗ ನಾವು ಯೋಚನೆ ಮಾಡುತ್ತೇವೆ. ಇದುವರೆಗೂ ನಮ್ಮನ್ನು ಯಾವ ಕಾಂಗ್ರೆಸ್ ನಾಯಕರೂ ಸಂಪರ್ಕ ಮಾಡಿಲ್ಲ. ಆದರೆ, ದೇವೇಗೌಡರು ರಾಜ್ಯಸಭೆಗೆ ಸ್ಪರ್ಧಿಸಿದರೆ ಪಕ್ಷಾತೀತವಾಗಿ ಬೆಂಬಲಿಸುತ್ತಾರೆ ಎಂಬ ನಂಬಿಕೆಯಿದೆ ಎಂದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button