ಪ್ರಗತಿವಾಹಿನಿ ಸುದ್ದಿ; ನವದೆಹಲಿ: ರಾಜ್ಯಸಭಾ ಉಪಚುನಾವಣೆಗೆ ರಾಜ್ಯ ಬಿಜೆಪಿ ನಾಯಕರು ಸೂಚಿಸಿದ್ದ ಹೆಸರನ್ನು ತಿರಸ್ಕ್ಕರಿಸಿರುವ ಬಿಜೆಪಿ ಹೈಕಮಾಂಡ್, ಅಚ್ಚರಿಯ ಅಭ್ಯರ್ಥಿ ಹೆಸರನ್ನು ಘೋಷಿಸಿದೆ.
ಆರ್ ಎಸ್ ಎಸ್ ಮೂಲದ ಡಾ.ಕೆ ನಾರಾಯಣ ಅವರನ್ನು ಬಿಜೆಪಿ ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ. ಈ ಮೂಲಕ ರಾಜ್ಯ ಬಿಜೆಪಿ ನಾಯಕರಿಗೆ ಹೈಕಮಾಂಡ್ ಮತ್ತೆ ಸಂದೇಶ ರವಾನಿಸಿದೆ.
ಅಶೋಕ್ ಗಸ್ತಿ ನಿಧನದಿಂದ ತೆರವಾಗಿದ್ದ ರಾಜ್ಯಸಭೆ ಸ್ಥಾನಕ್ಕೆ ಡಿ.1ರಂದು ಚುನಾವಣೆ ನಡೆಯುತ್ತಿದ್ದು, ರಾಜ್ಯ ಬಿಜೆಪಿ ಘಟಕ ಅಶೋಕ್ ಗಸ್ತಿ ಪತ್ನಿ ಸುಮಾ ಗಸ್ತಿ, ಪರಿಷತ್ ಮಾಝಿ ಸದಸ್ಯ ಶಂಕರಪ್ಪ, ಮಾಜಿ ಶಾಸಕ ನಿರ್ಮಲ್ ಕುಮಾರ್ ಸುರಾನ ಹೆಸರನ್ನು ಶಿಫಾರಸು ಮಾಡಿತ್ತು. ಆದರೆ ರಾಜ್ಯ ನಾಯಕರ್ಉ ಸೂಚಿಸಿದ ಮೂರೂ ಹೆಸರನ್ನು ತಿರಸ್ಕರಿಸಿರುವ ಬಿಜೆಪಿ ಹೈಕಮಾಂಡ್ ಇದೀಗ ಡಾ. ಕೆ.ನಾರಾಯಣ ಎಂಬ ಹೊಸ ಅಭ್ಯರ್ಥಿಗೆ ಟಿಕೆಟ್ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ