Latest

ರಾಜ್ಯಸಭಾ ಚುನಾವಣೆ; 4 ಸ್ಥಾನಕ್ಕೆ 6 ಅಭ್ಯರ್ಥಿಗಳು ಕಣದಲ್ಲಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯಸಭಾ ಚುನಾವಣೆ ಅಖಾಡ ರಂಗೇರಿದ್ದು, ಖಾಲಿಯಿರುವ ನಾಲ್ಕು ಸ್ಥಾನಗಳಿಗೆ 6 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಆರು ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧವಾಗಿದೆ ಎಂದು ಚುನಾವಣಾಧಿಕಾರಿ ವಿಶಾಲಾಕ್ಷಿ ತಿಳಿಸಿದ್ದಾರೆ.

ಇಂದು ಮಧ್ಯಾಹ್ನ ಮೂರು ಗಂಟೆ ನಾಮಪತ್ರ ಹಿಂಪಡೆಯಲು ಅಂತಿಮ ಸಮಯವಾಗಿತ್ತು. ಆದರೆ ನಾಮಪತ್ರ ಸಲ್ಲಿಸಿದ ಆರು ಅಭ್ಯರ್ಥಿಗಳ ಪೈಕಿ ಯಾರೂ ಹಿಂಪಡೆದಿಲ್ಲ ಈ ಹಿನ್ನೆಲೆಯಲ್ಲಿ 6 ಅಭ್ಯರ್ಥಿಗಳು ಕಣದಲ್ಲಿ ಉಳಿದುಕೊಂಡಿದ್ದಾರೆ ಎಂದರು.

ಜೂನ್ 10ರಂದು ರಾಜ್ಯಸಭೆ ಚುನಾವಣೆ ನಡೆಯಲಿದ್ದು, ಅಂದು ಸಂಜೆಯೇ ಫಲಿತಾಂಶ ಪ್ರಕಟವಾಗಲಿದೆ. ಬಿಜೆಪಿಯಿಂದ ನಟ ಜಗ್ಗೇಶ್, ನಿರ್ಮಲಾ ಸೀತಾರಾಮನ್ ಹಾಗೂ ಲೆಹರ್ ಸಿಂಗ್ ಕಣಕ್ಕಿಳಿದಿದ್ದರೆ ಕಾಂಗ್ರೆಸ್ ನಿಂದ ಜೈರಾಮ್ ರಮೇಶ್, ಮನ್ಸೂರ್ ಅಲಿಖಾನ್ ಕಣದಲ್ಲಿದ್ದಾರೆ. ಜೆಡಿಎಸ್ ನಿಂದ ಕುಪೇಂದ್ರ ರೆಡ್ಡಿ ಕಣದಲ್ಲಿದ್ದಾರೆ. ಕಾಂಗ್ರೆಸ್ ಎರಡನೇ ಅಭ್ಯರ್ಥಿ ಹಿಂಪಡೆಯುವಂತೆ ಜೆಡಿಎಸ್ ಹಾಗೂ ಬಿಜೆಪಿ ಒತ್ತಡ ಹೇರಿತ್ತು. ಆದರೆ ಕೊನೆ ಕ್ಷಣದಲ್ಲಿ ಕಾಂಗ್ರೆಸ್ ನಾಯಕರು ಎರಡು ಪಕ್ಷಗಳ ಒತ್ತಡಕ್ಕೆ ಮಣಿಯದೇ ಎರಡನೇ ಅಭ್ಯರ್ಥಿ ಮನ್ಸೂರ್ ಅಲಿಖಾನ್ ಅವರನ್ನು ಕಣದಲ್ಲಿ ಉಳಿಸಿಕೊಂಡಿದ್ದಾರೆ. ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಒಟ್ಟು 6 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿದ್ದು, ಚುನಾವಣೆ ಅಖಾಡ ರೋಚಕ ಘಟ್ಟ ತಲುಪಿದೆ.
ಆಂಧ್ರದಲ್ಲಿ ವಿಷಾನಿಲ ಸೋರಿಕೆ; 30ಕ್ಕೂ ಹೆಚ್ಚು ಮಹಿಳೆಯರು ಅಸ್ವಸ್ಥ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button