
ಪ್ರಗತಿವಾಹಿನಿ ಸುದ್ದಿ: ರಾಜ್ಯಸಭಾ ಚುನಾವಣೆಗೆ ಎಐಸಿಸಿ ನಾಲ್ಕು ರಾಜ್ಯಗಳಿಂದ ನಾಲ್ಕು ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ್ದಾರೆ.
ಎಐಸಿಸಿ ಮಾಜಿ ಅಧ್ಯಕ್ಷೆ, ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ರಾಜ್ಯಸಭಾ ಅಖಾಡಕ್ಕೆ ಇಳಿದಿದ್ದು, ರಾಜಸ್ಥಾನದಿಂದ ಸ್ಪರ್ಧೆ ಮಾಡಿದ್ದಾರೆ. ಎಐಸಿಸಿ ಪ್ರಕಟಿಸಿರುವ ಅಭ್ಯರ್ಥಿಗಳ ಪಟ್ಟಿ ಈ ಕೆಳಗಿನಂತಿದೆ.
ರಾಜಸ್ಥಾನದಿಂದ ರಾಜ್ಯಸಭೆಗೆ ಸೋನಿಯಾ ಗಾಂಧಿ ಸ್ಪರ್ಧೆ
ಹಿಮಾಚಲಪ್ರದೇಶದಿಂದ ಅಭಿಷೆಕ್ ಮನು ಸಿಂಘ್ವಿ
ಮಹಾರಾಷ್ಟ್ರದಿಂದ ಚಂದ್ರಕಾಂತ ಹೊಂಡೋರೆ
ಬಿಹಾರದಿಂದ ಅಖಿಲೇಶ್ ಪ್ರಸಾದ್ ಸಿಂಗ್ ಗೆ ಟಿಕೆಟ್ ನೀಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ