Latest

ರಾಜ್ಯಸಭಾ ಚುನಾವಣೆ; ಕರ್ನಾಟಕದ ನಾಲ್ವರು ಅಭ್ಯರ್ಥಿಗಳೂ ಅವಿರೋಧ ಆಯ್ಕೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯಸಭೆ ಚುಣಾವಣೆ ಫಲಿತಾಂಶ ಹೊರಬಿದ್ದಿದ್ದು, ಕರ್ನಾಟಕದ ನಾಲ್ವರು ಅಭ್ಯರ್ಥಿಗಳಾದ ಬಿಜೆಪಿ ಅಭ್ಯರ್ಥಿಗಳಾದ ಈರಣ್ಣ ಕಡಾಡಿ ಮತ್ತು ಅಶೋಕ ಗಸ್ತಿ ಹಾಗೂ ಕಾಂಗ್ರೆಸ್‌ನಿಂದ ಮಲ್ಲಿಕಾರ್ಜುನ ಖರ್ಗೆ, ಜೆಡಿಎಸ್‌ನಿಂದ ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಈ ಕುರಿತು ಮಾಹಿತಿ ನೀಡಿದ್ದು, ರಾಜ್ಯಸಭಾ ಚುನಾವಣೆ-2020ರಲ್ಲಿ ಕರ್ನಾಟಕದಲ್ಲಿ ನಾಲ್ಕೂ ಜನ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಅವಿರೋಧವಾಗಿ ಆಯ್ಕೆಯಾದ ಅಧಿಕೃತ ಘೋಷಣಾ ಪತ್ರವನ್ನು ಕಾಂಗ್ರೆಸ್‍ನ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿಯ ಅಭ್ಯರ್ಥಿಗಳಾದ ಅಶೋಕ್ ಗಸ್ತಿ, ಈರಣ್ಣ ಕಡಾಡಿ ಅವರು ಪಡೆದುಕೊಂಡಿದ್ದಾರೆ.

Related Articles

Back to top button