ಪ್ರಗತಿವಾಹಿನಿ ಸುದ್ದಿ; ಬೆಂಗಳೂರು; ಮಾಜಿ ಸಚಿವ, ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಅವರ ಮತ ಅಸಿಂಧುಗೊಳಿಸುವಂತೆ ಬಿಜೆಪಿ ನಾಯಕರು ನೀಡಿದ ದೂರು ತಿರಸ್ಕರಿಸಿರುವ ಚುನಾವಣಾಧಿಕಾರಿ ವಿಶಾಲಾಕ್ಷಿ ಮತ ಅಸಿಂಧುಗೊಳಿಸಲಾಗದು ಎಂದು ತಿಳಿಸಿದ್ದಾರೆ.
ರಾಜ್ಯಸಭಾ ಚುನಾವಣೆ ಮತದಾನದ ವೇಳೆ ಶಾಸಕ ಹೆಚ್.ಡಿ.ರೇವಣ್ಣ ಅವರು ತಮ್ಮ ಬ್ಯಾಲೇಟ್ ಪೇಪರ್ ನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ತೋರಿಸಿದ್ದಾರೆ. ಅವರ ಮತವನ್ನು ಅಸಿಂಧುಗೊಳಿಸಬೇಕು ಎಂದು ಬಿಜೆಪಿ ನಾಯಕರು ಚುನಾವಣಾಧಿಕಾರಿಗೆ ದೂರು ಸಲ್ಲಿಸಿದ್ದರು.
ಇದೀಗ ಈ ವಿಚಾರವಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬಳಿ ಸ್ಪಷ್ಟ ವಿವರಣೆ ನೀಡುರುವ ಚುನಾವಣಾಧಿಕಾರಿ ವಿಶಾಲಾಕ್ಷಿ, ಹೆಚ್.ಡಿ.ರೇವಣ್ಣ ಮತ ಅಸಿಂಧುವಾಗಿಲ್ಲ. ಮತದಾನದ ವೇಳೆ ಅವರು ವೋಟಿಂಗ್ ಶೀಟ್ ತೋರಿಸಿದ್ದನ್ನು ಪರಿಗಣಿಸಲು ಆಗಲ್ಲ. ಕಾರಣ ಚುನಾವಣೆ ವೇಳೆ ರೇವಣ್ಣ ಅವರನ್ನು ಸೂಚಕರನ್ನಾಗಿ ನೇಮಕ ಮಾಡಲಾಗಿತ್ತು. ಡಿ.ಕೆ.ಶಿವಕುಮಾರ್ ಅವರು ಸೂಚಕರಾಗಿದ್ದರು. ಹೀಗಾಗಿ ಅವರಿಬ್ಬರೂ ವೋಟಿಂಗ್ ಶೀಟ್ ತೋರಿಸಬಹುದು. ಮತ ಅಸಿಂಧುಗೊಳಿಸಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದ್ದಾರೆ.
ಮಾನ ಮರ್ಯಾದೆ ಇದ್ದರೆ ಪಕ್ಷ ಬಿಟ್ಟು ಹೋಗಲಿ; ಶಾಸಕ ಶ್ರೀನಿವಾಸ್ ಗೌಡ ವಿರುದ್ಧ ಹೆಚ್ ಡಿಕೆ ಹಿಗ್ಗಾ ಮುಗ್ಗಾ ವಾಗ್ದಾಳಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ