
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನದೆ ಕುತೂಹಲಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಎರಡನೇ ಅಭ್ಯರ್ಥಿ ನಾಮಪತ್ರ ಹಿಂಪಡೆಯುವುದಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ನಾವು ಎರಡನೇ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ನಾಮಪತ್ರ ಯಾವುದೇ ಕಾರಣಕ್ಕೂ ಹಿಂಪಡೆಯಲ್ಲ. ಗೆಲ್ಲುವ ವಿಶ್ವಾಸದಿಂದಲೇ ನಾವು ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೇವೆ. ಬೇರೆ ಬೇರೆ ಮತಗಳು ನಮಗೂ ಬೀಳಲಿವೆ. ಕೆಲವರು ಆತ್ಮಸಾಕ್ಷಿಯಾಗಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುತ್ತಾರೆ ಎಂದು ಹೇಳಿದ್ದಾರೆ.
ಈ ನಡುವೆ ಕಾಂಗ್ರೆಸ್ ನಾಯಕರಿಗೆ ವಿಪ್ ಜಾರಿಯಾಗಿದ್ದು, ಕಡ್ಡಾಯವಾಗಿ ಮತದಾನದಲ್ಲಿ ಪಾಲ್ಗೊಳ್ಳುವಂತೆ ಸೂಚಿಸಲಾಗಿದೆ.
ಕಾರಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿತ ಅತ್ಯಾಚಾರ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ