
ಪ್ರಗತಿವಾಹಿನಿ ಸುದ್ದಿ: ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ವಿಧಾನಸೌಧಕ್ಕೆ ಆಗಮಿಸಿ ಮತ ಚಲಾವಣೆ ಮಾಡಿದರು.
ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ಮತದಾನ ನಡೆಯುತ್ತಿದೆ. ಬೆಳಿಗ್ಗೆ 9 ಗಂಟೆಯಿಂದ ಆರಂಭವಾಗಿರುವ ಮತದಾನ ಪ್ರಕ್ರಿಯೆ ಸಂಜೆ 4 ಗಂಟೆಯವರೆಗೆ ನಡೆಯಲಿದೆ.
ಸಿಎಂ ಸಿದ್ದರಾಮಯ್ಯ ಮತದಾನ ಮಾಡಿದರು. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಶಾಸಕರು ವಿಧಾನಸೌಧಕ್ಕೆ ಆಗಮಿಸಿ ಮತದಾನ ಮಾಡುತ್ತಿದ್ದಾರೆ.