Kannada NewsKarnataka NewsLatestPolitics

*ರಾಜ್ಯಸಭಾ ಚುನಾವಣೆ; ಮತದಾನದ ಅವಧಿ ಮುಕ್ತಾಯ; ಮತ ಹಾಕದೇ ಉಳಿದ ಓರ್ವ ಶಾಸಕ*

ಪ್ರಗತಿವಾಹಿನಿ ಸುದ್ದಿ: ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನದ ಅವಧಿ ಮುಕ್ತಾಯವಾಗಿದೆ. ಬಿಜೆಪಿಯ ಓರ್ವ ಶಾಸಕರು ಮತ ಚಲಾವಣೆ ಮಾಡಿಲ್ಲ ಎಂದು ತಿಳಿದುಬಂದಿದೆ.

ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ವಿಧಾನಸೌಧದ ಕೊಠಡಿ ಸಂಖ್ಯೆ 106 ರಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆದಿದ್ದು, 222 ಶಾಸಕರು ಮತ ಚಲಾಯಿಸಿದ್ದಾರೆ.

223 ಶಾಸಕರಲ್ಲಿ 222 ಶಾಸಕರು ಮತದಾನ ಮಾಡಿದ್ದಾರೆ. ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಮಾತ್ರ ಮತ ಚಲಾಯಿಸಿಲ್ಲ ಎಂದು ತಿಳಿದುಬಂದಿದೆ.

Home add -Advt

ಮತದಾನಕ್ಕಾಗಿ ವಿಧಾನಸೌಧಕ್ಕೆ ಆಗಮಿಸಿದ್ದ ಶಾಸಕ ಶಿವರಾಮ್ ಹೆಬ್ಬಾರ್ ಅಡ್ಡಮತದಾನ ಮಾಡುವ ಸಾಧ್ಯತೆ ಹಿನ್ನೆಲೆಯಲ್ಲಿ ಸಚೇತಕರು ಶಿವರಾಮ್ ಹೆಬ್ಬಾರ್ ಕೊಠಡಿಗೆ ವಿಪ್ ಅಂಟಿಸಿ ಬಿಜೆಪಿಗೆ ಮತ ಹಾಕುವಂತೆ ಸೂಚಿಸಿದ್ದರು.

ಇನ್ನು ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಕಾಂಗ್ರೆಸ್ ಅಭ್ಯರ್ಥಿಗೆ ಮತಚಲಾಯಿಸುವ ಮೂಲಕ ಅಡ್ಡಮತದಾನ ಮಾಡಿದ್ದಾರೆ. ಬಿಜೆಪಿ ಎಸ್.ಟಿ,ಸೋಮಶೇಖರ್ ವಿರುದ್ಧ ಕ್ರಮಕ್ಕೆ ಮುಂದಾಗಿದೆ.

Related Articles

Back to top button