
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ತೀವ್ರ ಜಿದ್ದಾಜಿದ್ದಿನ ಅಖಾಡವಾಗಿ ಪರಿಣಮಿಸಿರುವ ರಾಜ್ಯಸಭಾ 4 ಸ್ಥಾನಗಳಿಗೆ ಇಂದು ಚುನಾವಣೆ ನಡೆಯುತಿದ್ದು, ವಿಧಾನಸೌಧದಲ್ಲಿ ಮತದಾನ ಪ್ರಕ್ರಿಯೆ ಆರಂಭವಾಗಿದೆ.
ವಿಧಾನಸೌಢದ ಕೊಠಡಿ ಸಂಖ್ಯೆ 106ರಲ್ಲಿ ಮತದಾನ ನಡೆಯುತ್ತಿದೆ. ಕೋವಿಡ್ ನಿಯಮಗಳನ್ನು ಪಾಲಿಸಿ ಬೆಳಿಗ್ಗೆ 9 ಗಂಟೆಯಿಂದ ಆರಂಭವಾಗಿರುವ ಮತದಾನ ಸಂಖ್ಯೆ 4 ಗಂಟೆಯವರೆಗೆ ನಡೆಯಲಿದೆ. 224 ಸದಸ್ಯರು ಮತ ಚಲಾಯಿಸಲಿದ್ದಾರೆ. ಬಳಿಕ ಸಂಜೆ 5-6 ಗಂಟೆವರೆಗೆ ಮತ ಎಣಿಕೆ ನಡೆಯಲಿದ್ದು, ನಂತರ ಫಲಿತಾಂಶ ಪ್ರಕಟವಾಗಲಿದೆ.
ಬಿಜೆಪಿಯಿಂದ ನಟ ಜಗ್ಗೇಶ್, ನಿರ್ಮಲಾ ಸೀತಾರಾಮನ್ ಹಾಗೂ ಲೆಹರ್ ಸಿಂಗ್ ಕಣದಲ್ಲಿದ್ದು ಮೂರು ಅಭ್ಯರ್ಥಿಗಳು ಗೆಲ್ಲುವ ಭರವಸೆ ಬಿಜೆಪಿಯದ್ದಾಗಿದೆ. ನಾಲ್ಕನೇ ಸ್ಥಾನ ಕಾಂಗ್ರೆಸ್ ಪಾಲಾಗಲಿದೆಯೇ ಅಥವಾ ಜೆಡಿಎಸ್ ಪಾಲಾಗುತ್ತಾ ಎಂಬುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಪ್ರಧಾನ ಮಂತ್ರಿಯವರ ರಾಜ್ಯ ಪ್ರವಾಸ: ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿದ ಪ್ರಧಾನಿ ಮೋದಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ