Karnataka News

*ಮತ್ತೆ ಭಾರಿ ಮಳೆ ಮುನ್ಸೂಚನೆ: ಮತ್ತೊಂದೆಡೆ ಮೈ ಕೊರೆವ ಚಳಿ ಶುರು*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮತ್ತೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಕ್ಟೋಬರ್ 31ರಿಂದ ನವೆಂಬರ್ 2ರವರೆಗೆ ರಾಜ್ಯದ ವಿವಿಧೆಡೆ ಮಳೆಯಾಗಲಿದೆ.

Home add -Advt

ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ನವೆಂಬರ್ 1 ಹಾಗೂ 2ರಂದು ವ್ಯಾಪಕ ಮಳೆಯಾಗುವ ನಿರೀಕ್ಷೆ ಇದೆ.

ಒಟ್ಟಾರೆ ಮುಂದಿನ 5 ದಿನಗಳವರೆಗೆ ರಾಜ್ಯದ ಹಲವೆಡೆ ಮಳೆಯಾಗಲಿದೆ. ಇನ್ನೊಂದೆಡೆ ಚಳಿ ಕೂಡ ಆರಂಭವಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಮಂಜಿನೊಂದಿಗೆ ಮೈ ಕೊರೆಯುವ ಚಳಿ ಶುರುವಾಗಲಿದೆ.

ಒಂದೆಡೆ ಮಳೆ, ಮತ್ತೊಂದೆಡೆ ಚಳಿಯಿಂದಾಗಿ ವಾತಾವರಣದಲ್ಲಿ ಬದಲಾವಣೆಯಾಗುತ್ತಿದ್ದು, ಆರೋಗ್ಯ ಸಮಸ್ಯೆಗಳು ಹೆಚ್ಚಾಗುವ ಸಾಧ್ಯತೆ ಇದೆ.

Related Articles

Back to top button