Kannada NewsKarnataka NewsLatestPolitics

*ರಾಜ್ಯಸಭಾ ಚುನಾವಣೆ: ಮತದಾನ ಆರಂಭ*

ಪ್ರಗತಿವಾಹಿನಿ ಸುದ್ದಿ: ತೀವ್ರ ಕುತೂಹಲ ಮೂಡಿಸಿರುವ ರಾಜ್ಯಸಭಾ ಚುನಾವಣೆಗೆ ಮತದಾನ ಆರಂಭವಾಗಿದೆ. ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ಮತದಾನ ಪ್ರಕ್ರಿಯೆ ನಡೆಯುತ್ತಿದೆ.

ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ನಿಂದ ಅಜಯ್ ಮಕೇನ್, ಜಿ.ಸಿ.ಚಂದ್ರಶೇಖರ್, ಡಾ.ಸಯ್ಯದ್ ನಾಸೀರ್ ಕಣದಲ್ಲಿದ್ದರೆ, ಬಿಜೆಪಿಯಿಂದ ನಾರಾಯಣ ಬಾಂಡಗೆ ಹಾಗೂ ಬಿಜೆಪಿ -ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಕಣದಲ್ಲಿದ್ದಾರೆ.

Home add -Advt

ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಶಾಸಕರು ವಿಧಾನಸೌಧಕ್ಕೆ ಆಗಮಿಸಿ ಮತದಾನ ಮಾಡುತ್ತಿದ್ದಾರೆ. ರಾಜಾಜಿನಗರ ಬಿಜೆಪಿ ಶಾಸಕ ಸುರೇಶ್ ಕುಮಾರ್ ಮೊದಲ ಮತದಾನ ಮಾಡಿದ್ದಾರೆ.

ಅಡ್ಡಮತದಾನ, ಆಪರೇಷನ್ ಕಮಲ ಭೀತಿಯಿಂದ ಹಿಲ್ಟನ್ ಹೋಟೆಲ್ ಗೆ ಶಿಫ್ಟ್ ಆಗಿದ್ದ ಕಾಂಗ್ರೆಸ್ ಶಾಸಕರು ಬಸ್ ನಲ್ಲಿ ಆಗಮಿಸಿ ಮತದಾನ ಮಾಡುತ್ತಿದ್ದಾರೆ. ಸಂಜೆ ವೇಳೆಗೆ ಫಲಿತಾಂಶ ಹೊರಬೀಳಲಿದೆ.

Related Articles

Back to top button