Latest

*ರಾಖಿ ಸಾವಂತ್ ಬಂಧನ*

ಪ್ರಗತಿವಾಹಿನಿ ಸುದ್ದಿ; ಮುಂಬೈ: ಬಾಲಿವುಡ್ ನಲ್ಲಿ ಸದಾ ಸುದ್ದಿಯಲ್ಲಿರುವ ಬಿಗ್ ಬಾಸ್ ಖ್ಯಾತಿಯ ನಟಿ ರಾಖಿ ಸಾವಂತ್ ಅವರನ್ನು ಅಂಬೋಲಿ ಪೊಲೀಸರು ಬಂಧಿಸಿದ್ದಾರೆ ಎನಲಾಗಿದೆ.

ನಟಿ ಶೆರ್ಲಿನ್ ಚೋಪ್ರಾ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಖಿ ಸಾವಂತ್ ಅವರನ್ನು ಬಂಧಿಸಲಾಗಿದೆ ಮತ್ತು ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಮುಂಬೈ ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿದೆ ಎಂದು ಶೆರ್ಲಿನ್ ಚೋಪ್ರಾ ಟ್ವೀಟ್ ಮಾಡಿದ್ದಾರೆ.

ರಾಖಿ ತನ್ನ ಆಕ್ಷೇಪಾರ್ಹ ಫೋಟೋಗಳು ಮತ್ತು ವೀಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಶರ್ಲಿನ್ ದೂರು ದಾಖಲಿಸಿದ್ದರು.

ಕಳೆದ ವರ್ಷ ಮೈಸೂರು ಮೂಲದ ಆದಿಲ್ ಖಾನ್ ದುರಾನಿ ಎಂಬವರನ್ನು ಮದುವೆಯಾಗಿರುವುದಾಗಿ ಮತ್ತು ಇಸ್ಲಾಮ್ ಧರ್ಮಕ್ಕೆ ಮತಾಂತರ ಆಗಿರುವುದಾಗಿ ರಾಖಿ ಸಾವಂತ್ ಫೋಟೋ ಮತ್ತು ವೀಡಿಯೋ ಬಿಡುಗಡೆ ಮಾಡಿದ್ದರು. ಮಾತ್ರವಲ್ಲ ತನ್ನ ಹೆಸರನ್ನು ರಾಖಿ ಸಾವಂತ್ ಫಾತಿಮಾ ಎಂದು ಬದಲಾಯಿಸಿಕೊಂಡಿದ್ದರು ಎನ್ನಲಾಗಿದೆ.

Home add -Advt

*ಕನ್ನಡ ಚಿತ್ರರಂಗದ ಯುವನಟ ಧನುಷ್ ಇನ್ನಿಲ್ಲ*

https://pragati.taskdun.com/sandalwoodactordhanushdeath/

Related Articles

Back to top button