Kannada NewsKarnataka NewsLatestPolitics

*ಸಹೋದರ ಚನ್ನರಾಜ ಹಟ್ಟಿಹೊಳಿ ಹಾಗೂ ಅಧಿಕಾರಿಗಳು, ಸಿಬ್ಬಂದಿಗಳಿಗೆ ರಾಖಿ ಕಟ್ಟಿ ರಕ್ಷಾಬಂಧನ ಆಚರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*

ಪ್ರಗತಿವಾಹಿನಿ ಸುದ್ದಿ; ಮೈಸೂರು:ಪ್ರತಿ ವರ್ಷ ಬೆಳಗಾವಿ ಗ್ರಾಮೀಣ ಕ್ಷೇತ್ರದ ಜನರೊಂದಿಗೆ ರಕ್ಷಾ ಬಂಧನ ಕಾರ್ಯಕ್ರಮವನ್ನು ಆಚರಿಸುತ್ತಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಈ ಬಾರಿ ಗೃಹಲಕ್ಷ್ಮೀ ಯೋಜನೆಯ ಕಾರ್ಯಕ್ರಮದ ನಿಮಿತ್ತ ಮೈಸೂರಿನಲ್ಲಿ ಇರಬೇಕಾದ ಅನಿವಾರ್ಯತೆಯಿಂದಾಗಿ ಮೈಸೂರಿನಲ್ಲಿಯೇ ರಕ್ಷಬಂಧನ ಆಚರಿಸಿದರು.

ಸಹೋದರ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹಾಗೂ ಹಿರಿಯ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗೆ ರಾಖಿ ಕಟ್ಟುವ ಮೂಲಕ ಸಚಿವೆ ಲಕ್ಷ್ಮೀ ಹೆಬ್ಬಾಳಕ್ರ್ ಸಾಂಕೇತಿಕವಾಗಿ ರಕ್ಷಾ ಬಂಧನ ಆಚರಿಸಿದರು.

Home add -Advt

Related Articles

Back to top button