
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮರ್ಯಾದಾ ಪುರುಷೋತ್ತಮ ಅಯೋಧ್ಯ ಪ್ರಭು ಶ್ರೀರಾಮನ ಮಂದಿರ ನಿರ್ಮಾಣಕ್ಕಾಗಿ ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಅವರು ಇಂದು ರೂ 10 ಲಕ್ಷ ರೂಪಾಯಿಗಳನ್ನು ದೇಣಿಗೆ ನೀಡಿದರು.
ಈ ಸಂದರ್ಭದಲ್ಲಿ ಅಥಣಿ ಕ್ಷೇತ್ರದ ಶಾಸಕ ಮಹೇಶ್ ಕುಮಟಳ್ಳಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಉತ್ತರ ಪ್ರಾಂತ ಮಾನ್ಯ ಸಹ ಸಂಘ ಚಾಲಕರಾದ ಅರವಿಂದ ದೇಶಪಾಂಡೆ ಜಿ. ತಾಲೂಕು ಕಾರ್ಯವಾಹರಾದ ಸಂಜಯ್ ನಾಯಕ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.