ಪ್ರಗತಿವಾಹಿನಿ ಸುದ್ದಿ: ಅಯೋಧ್ಯೆಯಲ್ಲಿ ಭವ್ಯವಾದ ರಾಮ ಮಂದಿರ ನಿರ್ಮಾಣವಾಗಿದ್ದು, ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ಐತಿಹಾಸಿಕ ಕ್ಷಣಕ್ಕಾಗಿ ದೇಶಾದ್ಯಂತ ಜನರು ಕಾಯುತ್ತಿದ್ದಾರೆ. ಈ ನಡುವೆ ಕೇಂದ್ರ ಸರ್ಕಾರ ತನ್ನ ನೌಕರರಿಗೆ ಸಿಹಿ ಸುದ್ದಿ ನೀಡಿದೆ.
ರಾಮ ಮಂದಿರದಲ್ಲಿ ಜನವರಿ 22ರಂದು ರಾಮಲಲ್ಲಾ ಮೂರ್ತಿ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮ, ಮಂದಿರ ಉದ್ಘಾಟನೆ ನಡೆಯಲಿದೆ. ಅಂದು ಕೇಂದ್ರ ಸರ್ಕಾರಿ ನೌಕರರಿಗೆ ಅರ್ಧ ದಿನ ರಜೆ ಘೋಷಿಸಲಾಗಿದೆ. ಧಾರ್ಮಿಕ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ಅರ್ಧ ದಿನ ರಜೆ ಘೋಷಣೆ ಮಾಡಲಾಗಿದೆ.
ಜನವರಿ 22ರಂದು ಬೆಳಿಗ್ಗೆಯಿಂದ ಮಧ್ಯಾಹ್ನ 2:30ವರೆಗೆ ಕೇಂದ್ರ ಸರ್ಕಾರಿ ನೌಕರರಿಗೆ ರಜೆ ಇರಲಿದ್ದು 2:30ರ ಬಳಿಕ ಕೆಲಸಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ. ಭಾರತದ ಎಲ್ಲಾ ಕೇಂದ್ರ ಸರ್ಕಾರಿ ನೌಕರರು, ಕೈಗಾರಿಕಾ ಸಂಸ್ಥೆಗಳು, ಕೇಂದ್ರ ಸರ್ಕಾರಿ ಕಚೇರಿಗಳು, ಸಚಿಲಾಯಲ, ಇಲಾಖೆಗಳಿಗೆ ಅರ್ಧದಿನ ರಜೆ ನೀಡಲಾಗುವುದು ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ