*ಅಯೋಧ್ಯೆ: ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯನ್ನು ನೀವು ಮನೆಯಲ್ಲಿಯೇ ವೀಕ್ಷಿಸಬಹುದು; ಹೇಗೆ?*

ಪ್ರಗತಿವಾಹಿನಿ ಸುದ್ದಿ: ಕೋಟ್ಯಂತರ ಭಾರತೀಯರ ಕನಸು ನಾಳೆ ನನಸಾಗಲಿದೆ. ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣವಾಗಿದ್ದು, ನಾಳೆ ಜನವರಿ 22ರಂದು ರಾಮ ಮಂದಿರ ಉದ್ಘಾಟನೆಯಾಗಲಿದ್ದು, ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ.
ರಾಮ ಮಂದಿರ ಉದ್ಘಾಟನೆ ಹಾಗೂ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ನೆರವೇರಿಸಲಿದ್ದಾರೆ. ಅಯೋಧ್ಯೆಯಾದ್ಯಂತ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು, ಭದ್ರತೆ ಕಾರಣಕ್ಕಾಗಿ ಕೆಲ ಗಣ್ಯರಿಗೆ ಮಾತ್ರ ಆಹ್ವಾನ ನೀಡಲಾಗಿದೆ. ಆದರೆ ಈ ಐತಿಹಾಸಿಕ ಪೂಜೆ-ಪುನಸ್ಕಾರ, ಬಾಲರಾಮನ ವಿಗ್ರಹಕ್ಕೆ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಕ್ಷಣ ಕ್ಷಣದ ಮಾಹಿತಿಯನ್ನು ಪ್ರತಿಯೊಬ್ಬರೂ ಮನೆಯಲ್ಲಿಯೇ ಕುಳಿತು ಲೈವ್ ಕಾರ್ಯಕ್ರಮ ವೀಕ್ಷಿಸಬಹುದು.
ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನಾ ಕಾರ್ಯಕ್ರಮ ಡಿಡಿ ನ್ಯೂಸ್ ನಲ್ಲಿಯೂ ಪ್ರಸಾರವಾಗಲಿದೆ. ಅಲ್ಲದೇ ಜನವರಿ 23ರಂದು ದೂರದರ್ಶನದಲ್ಲಿ ಶ್ರೀರಾಮ ದೇವಸ್ಥಾನದ ಆರತಿ ಕೂಡ ನೇರಪ್ರಸಾರವಾಗಲಿದೆ.
ದೂರದರ್ಶನ ಯೂಟ್ಯೂಬ್ ಲಿಂಕ್ ನಲ್ಲಿಯೂ ವೀಕ್ಷಿಸಬಹುದು. ಇನ್ನು ಬೆಂಗಳೂರಿನ ವಿವಿಧ ಮಲ್ಟಿಫ್ಲೆಕ್ಸ್ ಗಳಲ್ಲಿಯೂ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನಾ ಲೈವ್ ಪ್ರಸಾರ ಮಾಡಲು ಸಿದ್ಧತೆ ನಡೆಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ