ಪ್ರಗತಿವಾಹಿನಿ ಸುದ್ದಿ: ಅಯೋಧ್ಯೆ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳೆದ 11ದಿನಗಳಿಂದ ವಿಶೇಷ ವ್ರತದಲ್ಲಿದ್ದರು. ಇಂದು ಶ್ರೀರಾಮಲಲ್ಲಾ ಸನ್ನಿಧನದಲ್ಲಿಯೇ ವ್ರತವನ್ನು ಅಂತ್ಯಗೊಳಿಸಿದ್ದಾರೆ.
ಅಯೋಧ್ಯೆಯ ರಾಮಮಂದಿರದಲ್ಲಿ ಭವ್ಯವಾದ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ಸಂಪನ್ನವಾಗಿದೆ. ಕಾಶಿಯ ಹೆಸರಾಂತ ವೈದಿಕ ಆಚಾರ್ಯ ಗಣೇಶ್ವರ್ ದ್ರಾವಿಡ್ ಹಾಗೂ ಆಚಾರ್ಯ ಲಕ್ಷ್ಮೀಕಾಂತ್ ದೀಕ್ಷಿತ್ ನೇತೃತ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ, ಮಠಾಧೀಶರ ಸಮ್ಮುಖದಲ್ಲಿ ಶ್ರೀರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಿದ್ದಾರೆ.
ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಬಳಿಕ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಗೋವಿಂದ ದೇವ್ ಗಿರಿ ಶ್ರೀಗಳು ಭಗವಂತನ ಪಾದದಿಂದ ಬಂದ ಅಮೃತ – ಚರಣಾಮೃತ ನೀಡಿದರು. ಚರಣಾಮೃತ ಸೇವನೆ ಮೂಲಕ ಪ್ರಧಾನಿ ಮೋದಿ 11 ದಿನಗಳ ವಿಶೇಷ ವ್ರತವನ್ನು ಅಂತ್ಯಗೊಳಿಸಿದ್ದಾರೆ.
ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಜನವರಿ 12ರಿಂದ ವ್ರತದಲ್ಲಿ ಇದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ